ಬೆಂಗಳೂರು: ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹೊತ್ತಲ್ಲೇ ಕೊರೊನಾ ವೈರಸ್ (Corona Virus) ಮತ್ತೆ ಭೀತಿ ಹುಟ್ಟಿಸಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 106 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಭಾನುವಾರ)33 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 344 ಕ್ಕೆ ಏರಿಕೆಯಾಗಿದೆ. ಪಾಸಿಟಿವಿ ರೇಟ್ ಕೂಡ ಏರಿಕೆ ಕಂಡಿದ್ದು,
iPhone 16 ಲೈನ್ಅಪ್ ಬಗ್ಗೆ ನಿಮಗೇನು ಗೊತ್ತು?: A18 ಚಿಪ್ ಯಾಕೆ ಹಾಕ್ತಾರೆ ಗೊತ್ತಾ?
7.35 % ಆಗಿದೆ. ಬೆಂಗಳೂರು ನಗರದಲ್ಲಿ ದಿನೇ ದಿನೇ ಕೊರೊನಾ (Covid-19) ಕೇಸ್ ಏರಿಕೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಇಂದು ನಗರದಲ್ಲಿ 95 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಆ ಮೂಲಕ ದಿನದ ಕೇಸ್ ಶತಕದ ಸನಿಹಕ್ಕೆ ತಲುಪಿದೆ. ಚಾಮರಾಜನಗರದಲ್ಲಿ 1, ದಕ್ಷಿಣ ಕನ್ನಡದಲ್ಲಿ 2, ಮಂಡ್ಯದಲ್ಲಿ 1, ಮೈಸೂರಿನಲ್ಲಿ 6, ಶಿವಮೊಗ್ಗದಲ್ಲಿ 1 ಪ್ರಕರಣ ವರದಿಯಾಗಿದೆ. ಕೊರೊನಾದಿಂದಾಗಿ ಇಂದು 323 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. 21 ಮಂದಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 7 ಮಂದಿ ಐಸಿಯುನಲ್ಲಿದ್ದಾರೆ.