ಬೆಳಗಾವಿಯ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಂಸದ ಸ್ಥಾನಕ್ಕೆ ತೀವ್ರ ಪೈಪೋಟಿ ಎದುರಾಗಿದ್ದು ಕಾಂಗ್ರೆಸ್ ಪಕ್ಷದ ಪ್ರಿಯಾಂಕಾ ಜಾರಕಿಹೋಳಿ ಅವರ ಪ್ರಚಾರ ಭರದಿಂದ ಸಾಗಿದೆ. ಇಡೀ ಚಿಕ್ಕೋಡಿ ಲೊಕಸಭಾ ಕ್ಷೇತ್ರದಲ್ಲಿಯೇ ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರದಿಂದ ಅತ್ಯಥಿಕ ಮತಗಳನ್ನು ನೀಡಿ,ಪ್ರಿಯಾಂಕಾ ಜಾರಕಿಹೋಳಿಯವರನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಕರ್ನಾಟಕ ಸರ್ಕಾರದ ದೆಹಲಿಯ ಪ್ರತಿನಿಧಿ,ಹಾಗೂ ವಿಧಾನಪರಿಷತ ಸದಸ್ಯರಾದ ಪ್ರಕಾಶ ಹುಕ್ಕೇರಿ ಹೇಳಿದರು.ಅವರು ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಲೊಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೋಳಿ ಅವರ ಪ್ರಚಾರಾರ್ಥವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತ
Ration Card: ಇಂದಿನಿಂದ ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ..! ಇಂತವರಿಗೆ ಮಾತ್ರ ಅವಕಾಶ
ಕಳೆದ 40 ವರ್ಷಗಳಿಂದ ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಜನರ ಸೇವೆಯನ್ನು ಮಾಡಿಕೊಂಡು ಬರುತ್ತಿದೇವೆ.ನಮ್ಮ ಕ್ಷೇತದ ಜನ ಯಾವತ್ತೂ ನಮ್ಮನೂ ಕೈ ಬಿಟ್ಟಿಲ್ಲ.ಪ್ರತಿಯೊಂದು ಲೊಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ-ಸದಲಗಾ ಕ್ಷೇತ್ರವು ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚಿನ ಮತಗಳನ್ನು ನೀಡಿಕೊಂಡು ಬರುತ್ತಿದೆ.ಈ ಬಾರಿಯು ಸಹ ಹೆಚ್ಚಿನ ಮತಗಳನ್ನು ಚಿಕ್ಕೋಡಿ ಸದಲಗಾ ಕ್ಷೇತ್ರದಿಂದ ನೀಡಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೋಳಿಯವರನ್ನು ಬಹುಮತಗಳಿಂದ ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಭರವಸೆಯನ್ನು ನೀಡಿದರು.