ಜೋಸ್ ಬಟ್ಲರ್ ಅಬ್ಬರಕ್ಕೆ ಕ್ರೀಸ್ ಗೇಲ್ ದಾಖಲೆ ಉಡೀಸ್ ಆಗಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ ಬಳಿಕ ಅತೀ ಹೆಚ್ಚು ಶತಕ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ
IPL 2024: RCB ಸತತ ಸೋಲಿಗೆ ಇದೇ ಕಾರಣ!? – ಹರ್ಭಜನ್ ಸಿಂಗ್ ದೂರಿದ್ದು ಇವರನ್ನ!?
IPL ಸೀಸನ್ 17 ರ 31ನೇ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಜೋಸ್ ಬಟ್ಲರ್ (Jos Buttler) ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರೋಚಕ ಜಯ ತಂದುಕೊಟ್ಟಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 223 ರನ್ ಕಲೆಹಾಕಿತು.
ಈ ಬೃಹತ್ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕ ಆಟಗಾರ ಜೋಸ್ ಬಟ್ಲರ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಏಕಾಂಗಿಯಾಗಿ ದಿಟ್ಟ ಹೋರಾಟ ಪ್ರದರ್ಶಿಸಿದ ಬಟ್ಲರ್ 60 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್, 9 ಫೋರ್ಗಳೊಂದಿಗೆ ಅಜೇಯ 107 ರನ್ ಬಾರಿಸಿದರು. ಈ ಮೂಲಕ 20ನೇ ಓವರ್ನ ಕೊನೆಯ ಎಸೆತದಲ್ಲಿ 1 ರನ್ ಕಲೆಹಾಕಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 2 ವಿಕೆಟ್ಗಳ ರೋಚಕ ಜಯ ತಂದುಕೊಟ್ಟರು
ಈ ಭರ್ಜರಿ ಸೆಂಚುರಿಯೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಜೋಸ್ ಬಟ್ಲರ್ ದ್ವಿತೀಯ ಸ್ಥಾನಕ್ಕೇರಿದರು