ಬೆಂಗಳೂರು:– ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 15 ರಿಂದ 10 ದಿನ ಮುಂಗಾರು ಅಧಿವೇಶನ; ಸರ್ಕಾರದ ವಿರುದ್ಧ ಮುಗಿ ಬೀಳಲು ವಿಪಕ್ಷಗಳು ಸಜ್ಜು!
ಕರಾವಳಿ ಕರ್ನಾಟಕದ ಎಲ್ಲ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ ಹಾಗೂ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಇನ್ನೂ ಮುಂದಿನ 5 ದಿನಗಳಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶದ ಕರಾವಳಿ, ಯಾಣಂನಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ 5 ದಿನಗಳಲ್ಲಿ ಮರಾಠವಾಡ, ತಮಿಳುನಾಡು, ಪುದುಚೇರಿ, ಕಾರೈಕಲ್, ರಾಯಲಸೀಮಾ, ತೆಲಂಗಾಣ, ಕರ್ನಾಟಕದ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ.