ಗದಗ: ಗದಗ ನಗರದ ಕೆ ಎಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಗದಗ ಜಿಲ್ಲಾ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಜರುಗಿತು.
ಗದುಗಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ ಹಾಗೂ ಗದಗ ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೈ ಅವರು ಕಾರ್ಯವನ್ನು ಉದ್ಘಾಟಿಸಿದ್ರು. ಆಕರ್ಷಕ ಪಥ ಸಂಚಲನ ನೆರವೇರಿತು.
ಕ್ರೀಡಾ ಜ್ಯೋತಿ ಆಗಮಿಸಿದ ನಂತರ ಪ್ರತಿಜ್ಞಾ ವಿಧಿ ಸ್ವೀಕರಿಸಿ ಕ್ರೀಡೆಗಳನ್ನ ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಪೊಲೀಸ್ ಕ್ರೀಡಾಪಟುಗಳು ಹಾಜರಿದ್ದರು.