ಹುಬ್ಬಳ್ಳಿ:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಆವರಣದಲ್ಲಿ ನಡೆದ ಬೃಹತ್ ಔಲಾದೇ ಗೌಸೆ ಅಜಮ್ (ಮೆಹಬೂಬೇ ಸುಭಾನೇ ಮಕ್ಕಳ ಸಮಾವೇಷ) ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದರು.
ಅಲ್ಹಜ್ ಸಯ್ಯದ್ ತಾಜುದ್ದೀನ್ ಖಾದ್ರಿ ಅಲ್ ಜಿಲಾನಿ, ಗುಲ್ಬರ್ಗಾ ಷರೀಫ್ ನ ಹಜರತ್ ಕ್ವಾಜಾ ಬಂದನವಾಜ್ ದರ್ಗಾದ ಖುಸ್ರೂ ಹುಸೇನ್ ಸಾಬ್ ಖಿಲಾಬಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಸಮಾವೇಷದ ಮುಖ್ಯ ಅತಿಥಿಗಳಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಶಾಸಕರಾದ ಪ್ರಸಾದ್ ಅಬ್ಬಯ್ಯ ಸೇರಿ ಹಲವಾರು ಶಾಸಕರು ಮತ್ತು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.