ನಿರಂತರವಾಗಿ ಮಳೆಯಾಗುತ್ತಿದ್ದು, ಎಲ್ಲಾ ಅಧಿಕಾರಿಗಳು ಸನ್ನದ್ಧರಾಗಿ ಕಾರ್ಯನಿರ್ವಹಿಸಲು ಸೂಚನೆ: ತುಷಾರ್ ಗಿರಿ ನಾಥ್

ಬೆಂಗಳೂರು: ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಅಧಿಕಾರಿಗಳು ಸನ್ನದ್ಧರಾಗಿ ಕಾರ್ಯನಿರ್ವಹಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ವರ್ಚುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದು ಮುಂಜಾನೆಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಎಲ್ಲಾ ಅಧಿಕಾರಿಗಳು ಮುಂಜಾಗ್ರತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಎಲ್ಲಿಯೂ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹ ಪೀಡಿತ ಪ್ರದೇಶಗಳ ಬಳಿ ನಿಗಾವಹಿಸಬೇಕು. … Continue reading ನಿರಂತರವಾಗಿ ಮಳೆಯಾಗುತ್ತಿದ್ದು, ಎಲ್ಲಾ ಅಧಿಕಾರಿಗಳು ಸನ್ನದ್ಧರಾಗಿ ಕಾರ್ಯನಿರ್ವಹಿಸಲು ಸೂಚನೆ: ತುಷಾರ್ ಗಿರಿ ನಾಥ್