ಪಾಟ್ನಾ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹರಿದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಸಚಿವರೊಬ್ಬರು ನೀಡಿರುವ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಬಿಹಾರದ ಜಮುಯಿ ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ನಿಂದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರನ್ನು ಹತ್ಯೆ ಮಾಡಲಾಯಿತು. ಘಟನೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ಸೇರಿದಂತೆ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಬಿಹಾರ ಸಚಿವ ಚಂದ್ರಶೇಖರ್, ಇಂತಹ ಘಟನೆಗಳು ಹೊಸದೇನಲ್ಲ. ಇವುಗಳು ನಡೆಯುತ್ತಲೇ ಇರುತ್ತವೆ. ಈ ಹಿಂದೆಯೂ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಇಂತಹ ಘಟನೆಗಳು ನಡೆದಿವೆ ಎಂದು ಹೇಳಿಕೆ ನೀಡಿದ್ದಾರೆ. ಪ್ರಕರಣದ ಆರೋಪಿಗಳಿಗೆ ಕಾನೂನಿನ ಪ್ರಕಾರ ಶಿಕ್ಷೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಜಮುಯಿಯ ಮಹುಲಿಯಾ ತಾಂಡ್ ಗ್ರಾಮದಲ್ಲಿ ಈ ಹತ್ಯೆ ಘಟನೆ ನಡೆದಿದೆ. ಮೃತರನ್ನು ಪ್ರಭಾತ್ ರಂಜನ್ ಎಂದು ಗುರುತಿಸಲಾಗಿದ್ದು, ಸಿವಾನ್ ಜಿಲ್ಲೆಯ ನಿವಾಸಿಯಾಗಿದ್ದಾರೆ. ಗರ್ಹಿ ಪೊಲೀಸ್ ಠಾಣೆಯ ಉಸ್ತುವಾರಿ ವಹಿಸಿದ್ದರು. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು.
ಭಾತ್ ರಂಜನ್ ಅವರು ನಾಲ್ಕು ವರ್ಷದ ಮಗಳು ಮತ್ತು ಆರು ತಿಂಗಳ ಗಂಡು ಮಗುವನ್ನು ಅಗಲಿದ್ದಾರೆ. ನವಜಾತ ಶಿಶುವಿಗೆ ಜನ್ಮ ನೀಡಿದ ನಂತರ ಅವರ ಪತ್ನಿ ಪ್ರಸ್ತುತ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತ ಪೊಲೀಸರ ಇಡೀ ಕುಟುಂಬ ರಾಷ್ಟ್ರ ರಾಜಧಾನಿಯಲ್ಲಿ ನೆಲೆಸಿದೆ. ಗಾಯಗೊಂಡ ಗೃಹರಕ್ಷಕನನ್ನು ರಾಜೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಅವರನ್ನು ಜಮುಯಿಯಲ್ಲಿರುವ ಖಾಸಗಿ ಕ್ಲಿನಿಕ್ಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.