ಶೀತ ವಾತಾವರಣದಲ್ಲಿ ಸೋಂಕು, ನೆಗಡಿ-ಕೆಮ್ಮು, ಜ್ವರ ಸೇರಿದಂತೆ ಅನೇಕ ರೋಗಗಳ ಅಪಾಯವು ಹೆಚ್ಚಾಗುತ್ತದೆ. ಇವುಗಳಲ್ಲಿ ಅತ್ಯಂತ ಅಪಾಯಕಾರಿ ಎಂದರೆ ಹೃದಯಾಘಾತ. ಚಳಿಗಾಲದಲ್ಲಿ ಹೃದಯಾಘಾತದ ಅಪಾಯ ಹೆಚ್ಚಾಗುತ್ತದೆ.
ಮೂರು ಕ್ಷೇತ್ರಗಳ ಬೈ ಎಲೆಕ್ಷನ್ ಫಲಿತಾಂಶಕ್ಕೆ ಕ್ಷಣಗಣನೆ: ಯಾರ್ ಗೆಲ್ತಾರೆ…ಯಾರ್ ಸೋಲ್ತಾರೆ..!?
ನಿಮ್ಮ ಜೀವನಶೈಲಿ ಹೃದಯಾಘಾತಕ್ಕೆ ಕಾರಣವಾಗುತ್ತದೆ. ಹಾಗಾಗಿ, ಇಂತಹ ಪರಿಸ್ಥಿತಿಯಲ್ಲಿ, ಆರೋಗ್ಯ ಕಾಪಾಡಿಕೊಳ್ಳಲು ಕೆಲವು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕಾಗಿದೆ. ಇದರಿಂದ ಹೃದಯವನ್ನು ಆರೋಗ್ಯಕರವಾಗಿ ಕಾಪಾಡಿಕೊಳ್ಳಬಹುದು. ಹಾಗಾದರೆ ಜೀವನಶೈಲಿಯಲ್ಲಿ ಯಾವ ರೀತಿಯ ಬದಲಾವಣೆಗಳನ್ನು ಮಾಡಿಕೊಳ್ಳಬೇಕು? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ನಡಿಗೆ: ಮೊದಲನೆಯದಾಗಿ, ನೀವು ಪ್ರತಿನಿತ್ಯ ವಾಕಿಂಗ್ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳಿ. ನೀವು ಹೆಚ್ಚು ಕಷ್ಟಕರವಾದ ವ್ಯಾಯಾಮಗಳನ್ನು ಮಾಡುವುದು ಮುಖ್ಯವಲ್ಲ. ಆದರೆ ನೀವು ದಿನಕ್ಕೆ ಕನಿಷ್ಠ 8 ರಿಂದ 9 ಸಾವಿರ ಹೆಜ್ಜೆಗಳನ್ನು ನಡೆಯದಿದ್ದರೆ, ಅದು ನಿಮ್ಮ ಹೃದಯದ ಆರೋಗ್ಯಕ್ಕೆ ಹಾನಿ ಮಾಡುತ್ತದೆ ಎಂಬುದನ್ನು ಮರೆಯಬೇಡಿ. ಪ್ರತಿದಿನ ವ್ಯಾಯಾಮ ಮತ್ತು ವಾಕಿಂಗ್ ಮಾಡುವುದರಿಂದ ತೂಕ ಕಡಿಮೆ ಆಗುತ್ತದೆ ಜೊತೆಗೆ ಈ ಅಭ್ಯಾಸ ಹೃದ್ರೋಗ, ಪಾರ್ಶ್ವವಾಯು, ರಕ್ತದೊತ್ತಡ ಮತ್ತು ಮಧುಮೇಹವನ್ನು ನಿಯಂತ್ರಿಸುತ್ತದೆ.
ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಿ: ಬೊಜ್ಜು ಒಂದು ಅಥವಾ ಎರಡಲ್ಲ, ಇದು ನೂರಾರು ರೋಗಗಳಿಗೆ ಕಾರಣವಾಗುತ್ತದೆ. ಬೊಜ್ಜು ಮಧುಮೇಹ, ಅಧಿಕ ರಕ್ತದೊತ್ತಡದಂತಹ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಆದ್ದರಿಂದ, ಈ ಸಮಯದಲ್ಲಿ ನಿಮ್ಮ ತೂಕವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ವಿಶೇಷವಾಗಿ, ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿಯೂ ಅನಗತ್ಯ ತೂಕ ಹೆಚ್ಚಳವಾಗುತ್ತಿರುವುದು ಮುಂದೆ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ನಿಮ್ಮ ಆರೋಗ್ಯದ ಬಗ್ಗೆ ಸಾಕಷ್ಟು ಕಾಳಜಿ ಇರಲಿ.
ಸಂಸ್ಕರಿಸಿದ ಆಹಾರ ಸೇವನೆ ಮಾಡುವುದನ್ನು ತಪ್ಪಿಸಿ: ನೀವು ಹೊರಗಿನ ಆಹಾರವನ್ನು ಹೆಚ್ಚು ಸೇವಿಸಿದರೆ, ನಿಮ್ಮ ಹೃದಯದ ಆರೋಗ್ಯ ಅಷ್ಟೇ ವೇಗವಾಗಿ ಹಾಳಾಗುತ್ತದೆ. ಕರಿದ ಆಹಾರಗಳು, ಸಾಸೇಜ್ಗಳು, ಬೆಣ್ಣೆ ಮತ್ತು ಕೇಕ್ಗಳಂತಹ ಕೊಬ್ಬಿನಿಂದ ತಯಾರಾದ ಆಹಾರಗಳು ಎಲ್ಡಿಎಲ್ ಕೊಲೆಸ್ಟ್ರಾಲ್ ಮಟ್ಟವನ್ನು ವೇಗವಾಗಿ ಹೆಚ್ಚಿಸುತ್ತವೆ, ಇದು ಹೃದಯದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
ವಿರಾಮ ತೆಗೆದುಕೊಳ್ಳಿ: ನಿರಂತರವಾಗಿ ಕೆಲಸದಲ್ಲಿ ನಿರತರಾಗಬೇಡಿ. ರಜೆ ತೆಗೆದುಕೊಳ್ಳಿ, ಹೊರಗೆ ಹೋಗಿ ಮತ್ತು ನಿಮಗೆ ಇಷ್ಟವಾದದ್ದನ್ನು ಮಾಡಿ. ಹೀಗೆ ಮಾಡುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ ಮತ್ತು ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ.