ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೊಸವರ್ಷ ಆಚರಣೆಗೆ ರಾಜ್ಯ ಸರ್ಕಾರ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪಬ್, ರೆಸ್ಟೋರೆಂಟ್ ಗಳಲ್ಲಿ ಶೇ.50 ರಷ್ಟು ಮಂದಿಗೆ ಅವಕಾಶ ನೀಡಲಾಗಿದ್ದು, ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇನ್ನೂ ರಾಜ್ಯದಲ್ಲಿ 12 ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 31 ಕ್ಕೆ ಏರಿಕೆ ಆಗಿದೆ. ಹೀಗಾಗಿ ಕೇಂದ್ರ ಸರ್ಕಾರ ರಾಜ್ಯಗಳಿಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ ಹಿನ್ನೆಲೆ, ರಾಜ್ಯ ಸರ್ಕಾರ ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಅಲ್ಲದೇ ಮುಂದಿನ ದಿನದಲ್ಲಿ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಲಾಗಿದೆ.
