ಬೆಂಗಳೂರು:– ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ತಾಳಗುಪ್ಪ, ಗುಬ್ಬಿ, ಕೊಣನೂರು, ಬೆಳ್ತಂಗಡಿಯಲ್ಲಿ ಭಾರಿ ಮಳೆಯಾಗಿದೆ. ವಿಜಯಪುರದಲ್ಲಿ 17.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲೂ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 25.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 25.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತ ಭಾರೀ ಮಳೆಯಿಂದಾಗಿ ಚೆನ್ನೈನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.