ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಬಹುತೇಕ ಒಣಹವೆ ಮುಂದುವರಿದಿದೆ. ಅದೇ ರೀತಿ ಮುಂದಿನ 48 ಗಂಟೆಯ ಅವಧಿಯಲ್ಲೂ ಬೆಂಗಳೂರಿನಲ್ಲಿ ಇದೇ ವಾತಾವರಣ ಮುಂದುವರಿಯಲಿದೆ
ಶೇ.60 ರಷ್ಟು ಕನ್ನಡ ಬೋರ್ಡ್ ಕಡ್ಡಾಯ: ನಿಯಮ ಉಲ್ಲಂಘಿಸಿದ್ರೆ ಲೈಸೆನ್ಸ್ ಕಡ್ಡಾಯ – BBMP
ಎಲ್ಲಿ ನೋಡಿದರೂ ಬಿಸಿಲು, ಧಗೆ, ಸೆಕೆ ಎನ್ನುವ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಹಲವು ಕಡೆ ಗುರುವಾರ ಮತ್ತು ಶುಕ್ರವಾರ ಗರಿಷ್ಠ ತಾಪಮಾನದಲ್ಲಿ ಸರಿಸುಮಾರು 2 ಡಿಗ್ರಿ ಸೆಲ್ಸಿಯಸ್ವರೆಗೆ ಹೆಚ್ಚಳವಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನಾ ವರದಿಯಲ್ಲಿ ಉಲ್ಲೇಖಿಸಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ಇನ್ನು ಈ ಭಾಗದ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನ ಸಹ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಏರಿಕೆ ಆಗಲಿದೆ.