ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಚಳಿಯ ಪ್ರಮಾಣ ಹೆಚ್ಚಳವಾಗುತ್ತಿದೆ. ಇದರ ನಡುವೆ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಮೈಸೂರು, ಮಂಡ್ಯ, ಮಡಿಕೇರಿ, ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಕೊಂಚ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ಸದ್ಯ ಕರ್ನಾಟಕದಲ್ಲಿ ಅಲ್ಲಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುವ ಜೊತೆಗೆ ಚಳಿ ಹೆಚ್ಚಾಗುವ ಮುನ್ಸೂಚನೆ ದೊರೆತಿದೆ. ಉತ್ತರ ಒಳನಾಡಿನಲ್ಲಿ ಈ ವಾರಪೂರ್ತಿ ಶುಷ್ಕ ವಾತಾವರಣವೇ ಮುಂದುವರಿಯಲಿದೆ. ಹೀಗಿದ್ದರೂ ಈ ಭಾಗದಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದಿದೆ.
ರಾಜ್ಯದ ಬಹುತೇಕ ಕಡೆ ಗರಿಷ್ಠ ತಾಪಮಾನ ಮತ್ತು ಕನಿಷ್ಠ ತಾಪಮಾನ ಇಳಿಕೆ ಆಗಿದೆ. ಹೀಗಾಗಿ ಚಳಿಗಾಲ ಆರಂಭವಾದ ಅನುಭವವಾಗುತ್ತಿದೆ. ಈ ಮೂಲಕ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಚಳಿ ಆವರಿಸುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ