ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬಿಷ್ಣೋಯಿ ಗ್ಯಾಂಗ್ ನಿಂದ ಪದೇ ಪದೇ ಜೀವ ಬೆದರಿಕೆ ಕರೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಲ್ಮಾನ್ ಸಾಕಷ್ಟು ಎಚ್ಚರಿಕೆ ವಹಿಸಿದ್ದಾರೆ. ಈಗಾಗಲೇ ಸಲ್ಮಾನ್ ಬಳಿ ಬುಲೆಟ್ ಫ್ರೂವ್ ಕಾರಿದ್ದರು ಕಳೆದ ಕೆಲ ತಿಂಗಳ ಹಿಂದೆ ಮತ್ತಷ್ಟು ಸೆಕ್ಯೂರಿಟಿ ಇರುವ ಬುಲೆಟ್ ಫ್ರೂಫ್ ಕಾರು ಖರೀದಿಸಿದ್ದರು. ಇದೀಗ ಸಲ್ಮಾನ್ ಮನೆಗೆ ಬುಲೆಟ್ ಪ್ರೂವ್ ಗ್ಲಾಸ್ ಗಳನ್ನು ಹಾಕಿಸಿದ್ದಾರೆ.
ಸಲ್ಮಾನ್ ಖಾನ್ ಅನ್ನು ಕೊಂದೇ ತೀರುವುದಾಗಿ ಲಾರೆನ್ಸ್ ಬಿಷ್ಣೋಯಿ ಮತ್ತು ಅವನ ಸಹಚರರು ಶಪಥ ತೊಟ್ಟಿದ್ದಾರೆ. ಈಗಾಗಲೇ ಸಲ್ಮಾನ್ ಖಾನ್ರ ಆಪ್ತ ಮಾಜಿ ಶಾಸಕ ಬಾಬಾ ಸಿದ್ಧಿಖಿಯನ್ನು ಬಿಷ್ಣೋಯಿ ಸಹಚರರು ಕೊಂದಿದ್ದಾಗಿದೆ. ಹೀಗಾಗಿ ಸಲ್ಮಾನ್ ಖಾನ್ ಸಾಕಷ್ಟು ಎಚ್ಚರಿಕೆ ವಹಿಸುತ್ತಿದ್ದಾರೆ. ಕೆಲ ತಿಂಗಳ ಹಿಂದೆ ಸಲ್ಮಾನ್ ಖಾನ್ ಅವರ ಗ್ಯಾಲೆಕ್ಸಿ ನಿವಾಸದ ಮೇಲೆ ಕೆಲವು ದುಷ್ಕರ್ಮಿಗಳು ದಾಳಿ ಮಾಡಿದ್ದರು. ಗ್ಯಾಲೆಕ್ಸಿ ಅಪಾರ್ಟ್ಮೆಂಟ್ನ ಗಾಜಿನ ಕಿಟಕಿಗಳ ಮೇಲೆ ಶೂಟ್ ಮಾಡಿ ದುಷ್ಕರ್ಮಿಗಳು ಪರಾರಿ ಆಗಿದ್ದರು. ಮತ್ತೊಮ್ಮೆ ಇಂಥಹಾ ದಾಳಿಯ ಸಾಧ್ಯತೆ ಇರುವ ಕಾರಣ ಇದೀಗ ಸಲ್ಮಾನ್ ಖಾನ್ರ ನಿವಾಸಕ್ಕೆ ಬುಲೆಟ್ ಪ್ರೂಫ್ ಗಾಜುಗಳನ್ನು ಅಳವಡಿಕೆ ಮಾಡಲಾಗಿದೆ.
ಸಲ್ಮಾನ್ ಖಾನ್ರ ಗ್ಯಾಲೆಕ್ಸಿ ಅಪಾರ್ಟ್ಮೆಂಟ್ನ ಕಿಟಕಿಗಳಿಗೆ ಬುಲೆಟ್ ಪ್ರೂಫ್ ಗಾಜುಗಳನ್ನು ಅಳವಡಿಸಲಾಗಿದೆ. ವಿಶೇಷವಾಗಿ ರಸ್ತೆಯ ಬದಿ ಇರುವ ಹಾಗೂ ಇತರೆ ಅಪಾರ್ಟ್ಮೆಂಟ್ಗಳಿಗೆ ಹೊರಗಿನಿಂದ ಕಾಣುವ ಕಿಟಿಕಿಗಳಿಗೆ ಈ ಗುಂಡು ನಿರೋಧಕ ಗಾಜುಗಳನ್ನು ಅಳವಡಿಸಲಾಗಿದೆ. ಜೊತೆಗೆ ಸಲ್ಮಾನ್ ಖಾನ್ ಅವರ ಮನೆಯ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.
ಸದ್ಯ ಸಲ್ಮಾನ್ ಖಾನ್ ಪ್ರಸ್ತುತ ‘ಸಿಖಂಧರ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾದ ನಿರ್ದೇಶನವನ್ನು ತಮಿಳಿನ ಮುರುಗದಾಸ್ ಮಾಡುತ್ತಿದ್ದು, ಸಲ್ಮಾನ್ ಆತ್ಮೀಯ ಗೆಳೆಯ ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದಾರೆ.