ಬೆಂಗಳೂರು: ನಗರದಲ್ಲಿ ನಿಲ್ಲದನೀರಿನ ಸಮಸ್ಯೆಯಿಂದ ಬೇಸತ್ತಿರುವ ಅನೇಕ ಐಟಿ ಉದ್ಯೋಗಿಗಳು ಊರುಗಳಿಗೆ ತೆರಳುತ್ತಿದ್ದರೆ, ಇನ್ನು ಕೆಲವರು ಮೈಸೂರು, ಮುಂಬೈ ಎಂದು ಬೇರೆ ನಗರಗಳಿಗೆ ತೆರಳುತ್ತಿದ್ದಾರೆ.
ಮತ್ತೊಂದೆಡೆ, ನೋ ವರ್ಕ್ ಫ್ರಂ ಹೋಮ್ ಪಾಲಿಸಿ ಅಳವಡಿಸಿಕೊಂಡಿರುವ ಕಂಪನಿಗಳ ಉದ್ಯೋಗಿಗಳ ಪಾಡು ಹೇಳತೀರದಾಗಿದೆ. ಈ ಮಧ್ಯೆ, ನಗರದಲ್ಲಿ ನೀರಿನ ಸಮಸ್ಯೆಯೇ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
Lok Sabha Elections 2024: ಪ್ರಧಾನಿ ಮೋದಿ ಕರ್ನಾಟಕ ಭೇಟಿಗೆ ದಿನಾಂಕ ಫಿಕ್ಸ್: ಈ ಕ್ಷೇತ್ರಗಳೇ ಬಿಗ್ ಟಾರ್ಗೆಟ್!
ಬೆಂಗಳೂರಿನಲ್ಲಿ ಹೇಳುವಷ್ಟೇನೂ ನೀರಿನ ಕೊರತೆ ಇಲ್ಲ, ಬಿಜೆಪಿಯವರು ಕೊರತೆಯನ್ನು ಸೃಷ್ಟಿಸಿದ್ದಾರೆ. ತಮಿಳುನಾಡಿಗೆ ಕಾನೂನಾತ್ಮಕವಾಗಿ ಕೇಳಿದ್ದನ್ನು ನಾವು ನೀಡುತ್ತಿದ್ದೇವೆ. ಬೆಂಗಳೂರಿಗೆ ನೀರು ಕೊಡುವುದು ನಮ್ಮ ಆದ್ಯತೆ ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ.
ನಗರದಲ್ಲಿ ಸುಮಾರು 7 ಸಾವಿರ ಬೋರ್ವೆಲ್ಗಳ ಕೊರತೆಯಿದ್ದು, ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ