ಬೆಂಗಳೂರು :ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಹೀಗಾಗಿ ಆಸ್ಪತ್ರೆಗಳಿಗೆ ದಾಖಲಾಗುತ್ತಿ ರುವವರ ಸಂಖ್ಯೆ ಹೆಚ್ಚಾಗಿದೆ. ಸದ್ಯ ರಾಜ್ಯದಲ್ಲಿ ಮೂರನೇ ಅಲೆಯ ಭೀತಿ ಹೆಚ್ಚಾಗಿದ್ದು, ಇದರ ಮಧ್ಯೆ ಓಮಿಕ್ರಾನ್ ಸೇರಿದಂತೆ ರೂಪಾಂ ತರಿಗಳ ಭಯ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಎಲ್ಲ ವಯೋಮಾನದವರಿಗೂ ಆತಂಕ ಶುರುವಾಗಿದ್ದು, ಲಕ್ಷಣಗಳು ಕಾಣುತ್ತಿದ್ದಂತೆ ಹಲವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಿಬಿಎಂಪಿ ನೀಡಿದ ಅಂಕಿ-ಸಂಖ್ಯೆಗಳನ್ನು ಗಮನಿಸಿದರೆ, ಕಳೆದ 14 ದಿನಗಳಲ್ಲಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಸೋಂಕಿತರ ಪೈಕಿ 38 ಜನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, 296 ಜನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂಲಕ ಸರ್ಕಾರಿ ಆಸ್ಪತ್ರೆಗಿಂತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಲಾಗಿದೆ.

