ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್ ಪಂದ್ಯದಲ್ಲಿ ಜಸ್ಟ್ರೀತ್ ಬುಮ್ರಾ ಹೊಸ ದಾಖಲೆ ಬರೆದಿದ್ದಾರೆ. ಹೌದು ಭಾರತದ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನ ಆಸ್ಟ್ರೇಲಿಯಾ ಹಿಡಿತ ಸಾಧಿಸಿದರೂ ಬುಮ್ರಾ 5 ವಿಕೆಟ್ ಗಳಿಸಿ ದಾಖಲೆ ಬರೆದಿದ್ದಾರೆ. ಮೊದಲ ದಿನ ವಿಕೆಟ್ ನಷ್ಟ ಇಲ್ಲದೇ 28 ರನ್ ಗಳಿಸಿದ್ದ ಆಸ್ಟ್ರೇಲಿಯಾ ಇಂದು 101 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 405 ರನ್ಗಳಿಸಿದೆ.
ಸ್ವೀವ್ ಸ್ಮಿತ್ 101 ರನ್ (190 ಎಸೆತ, 12 ಬೌಂಡರಿ), ಟ್ರಾವಿಸ್ ಹೆಡ್ 152 ರನ್( 160 ಎಸೆತ, 18 ಬೌಂಡರಿ) ಹೊಡೆದರು. ದಿನದ ಅಂತ್ಯಕ್ಕೆ ಅಲೆಕ್ಸ್ ಕ್ಯಾರಿ 45 ರನ್, ಮಿಶೆಲ್ ಸ್ಟ್ರಾಕ್ 7 ರನ್ ಹೊಡೆದು ಬ್ಯಾಟಿಂಗ್ ಮುಂದುವರಿಸಲಿದ್ದಾರೆ. ಮೊದಲ ಇನ್ನಿಂಗ್ಸ್ನಲ್ಲಿ ಬುಮ್ರಾ 5 ವಿಕೆಟ್ ಪಡೆದಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ ಚಾಂಪಿಯನ್ಶಿಪ್ನಲ್ಲಿ 5 ವಿಕೆಟ್ ಪಡೆದ ಆಸ್ಟ್ರೇಲಿಯಾ ಪ್ಯಾಟ್ ಕಮ್ಮಿನ್ಸ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
Monday Tips: ಸೋಮವಾರ ಈ ಕೆಲಸ ಮಾಡಿದರೆ ಸಾಕು ಲಕ್ಷ್ಮೀ ಭಾಗ್ಯ ನಿಮ್ಮ ಮನೆಯಲ್ಲಿರುತ್ತೆ..!
ಈ 5 ವಿಕೆಟ್ಗಳೊಂದಿಗೆ ವಿದೇಶಿ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಭಾರತದ ವೇಗಿ ಎಂಬ ದಾಖಲೆಯನ್ನು ಜಸ್ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಭಾರತದ ಮಾಜಿ ನಾಯಕ ಕಪಿಲ್ ದೇವ್ ಹೆಸರಿನಲ್ಲಿತ್ತು.
ಪ್ಯಾಟ್ ಕಮ್ಮಿನ್ಸ್ ಮತ್ತು ಬುಮ್ರಾ 9 ಬಾರಿ 5 ವಿಕೆಟ್ ಗೊಂಚಲು ಪಡೆದಿದ್ದಾರೆ. ಕಗಿಸೋ ರಬಡಾ 7 ಬಾರಿ, ಆಸ್ಟ್ರೇಲಿಯಾದ ಜೋಶ್ ಹ್ಯಾಝಲ್ವುಡ್ ಮತ್ತು ನ್ಯೂಜಿಲೆಂಡ್ನ ಟಿಮ್ ಸೌಥಿ ತಲಾ 6 ಬಾರಿ 5 ವಿಕೆಟ್ ಪಡೆದಿದ್ದಾರೆ. ಬುಮ್ರಾ 5 ವಿಕೆಟ್ ಪಡೆದರೆ ಸಿರಾಜ್ ಮತ್ತು ನಿತೀಶ್ ಕುಮಾರ್ ರೆಡ್ಡಿ ತಲಾ ಒಂದೊಂದು ವಿಕೆಟ್ ಪಡೆದರು. ಮಳೆಯಿಂದಾಗಿ ಮೊದಲ ದಿನ ರದ್ದಾಗಿತ್ತು.