ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ನಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ.
KSDL ಅಧಿಕಾರಿ ಆತ್ಮಹತ್ಯೆ ಪ್ರಕರಣ: ಡಿಸಿಪಿ ಸೈದುಲು ಅಡಾವತ್ ಹೇಳಿದ್ದೇನು?
ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 184 ರನ್ಗಳಿಂದ ಸೋಲು ಕಂಡಿದೆ. ಈ ಸೋಲಿಗೆ ಯಾರು ಹೊಣೆ ಎಂಬ ಚರ್ಚೆ ಶುರುವಾಗಿದೆ.
ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 474 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 369 ರನ್ಗಳಿಗೆ ಆಲೌಟ್ ಆಗಿದೆ. ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 105 ರನ್ಗಳ ಮುನ್ನಡೆ ಸಾಧಿಸಿತು. 2ನೇ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ 234 ರನ್ ಗಳಿಸಿ 340 ರನ್ಗಳ ಗೆಲುವಿನ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಭಾರತ 155 ರನ್ ಗಳಿಸಿ 184 ರನ್ಗಳಿಂದ ಹೀನಾಯ ಸೋಲು ಕಂಡಿದೆ.
ಟೀಮ್ ಇಂಡಿಯಾ ಸೋಲಿಗೆ ಕಾರಣರಾದ ಪ್ರಮುಖ ಆಟಗಾರರ ಬಗ್ಗೆ ಮಾಹಿತಿ ಇಲ್ಲಿದೆ.
ಭಾರತ ತಂಡದ ಸೋಲಿಗೆ ಪ್ರಮುಖ ಕಾರಣ ಕ್ಯಾಪ್ಟನ್ ರೋಹಿತ್ ಶರ್ಮಾ. ಇವರು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಹೇಳಿಕೊಳ್ಳುವಷ್ಟು ಪ್ರದರ್ಶನ ನೀಡಲಿಲ್ಲ. ಮೆಲ್ಬೋರ್ನ್ ಟೆಸ್ಟ್ ಪಂದ್ಯದ 2 ಇನ್ನಿಂಗ್ಸ್ನಲ್ಲಿ 3 ಮತ್ತು 9 ರನ್ ಗಳಿಸಿ ಟೀಮ್ ಇಂಡಿಯಾ ಸೋಲಿಗೆ ಕಾರಣರಾದರು. ರೋಹಿತ್ ತಾನು ಆಡಿರೋ 3 ಪಂದ್ಯಗಳಲ್ಲಿ ಕೇವಲ 31 ರನ್ ಕಲೆ ಹಾಕಿದ್ದಾರೆ.
ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ. ಇವರು ಪರ್ತ್ ಶತಕದ ಬಳಿಕ ಶೈನ್ ಆಗಲೇ ಇಲ್ಲ. ಬಾಕ್ಸಿಂಗ್ ಡೇ ಟೆಸ್ಟ್ನಲ್ಲಿ ವಿರಾಟ್ 2 ಇನಿಂಗ್ಸ್ಗಳಲ್ಲಿ ಕ್ರಮವಾಗಿ 36 ಮತ್ತು 5 ರನ್ ಗಳಿಸಿದರು. ಭಾರತ ಗೆಲ್ಲಲೇಬೇಕಾದ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದು ಸೋಲಿಗೆ ಕಾರಣ ಎಂದರೆ ತಪ್ಪಾಗೋದಿಲ್ಲ.