ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ರೋಹಿತ್ ಶರ್ಮಾ ಅಲಭ್ಯರಿರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಭಾರತ ದೇಶದಲ್ಲಿರಲು ನೀನು ನಾಲಾಯಕ್: ಜಮೀರ್ ವಿರುದ್ಧ ಪ್ರಮೋದ್ ಮುತಾಲಿಕ್ ಕಿಡಿ
ರೋಹಿತ್ ಶರ್ಮಾ ದಂಪತಿಯು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು, ಹೀಗಾಗಿ ಪರ್ತ್ ಟೆಸ್ಟ್ ಪಂದ್ಯಕ್ಕೆ ಹಿಟ್ಮ್ಯಾನ್ ಅಲಭ್ಯರಾಗುವ ಸಾಧ್ಯತೆಯಿದೆ. ಇನ್ನು ರೋಹಿತ್ ಶರ್ಮಾ ಅಲಭ್ಯರಾದರೆ ಟೀಮ್ ಇಂಡಿಯಾವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆ ಮೂಡುವುದು ಸಹಜ.
ಈ ಪ್ರಶ್ನೆಗೆ ಖುದ್ದು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಉತ್ತರಿಸಿದ್ದಾರೆ. ರೋಹಿತ್ ಶರ್ಮಾ ಅವರು ಮೊದಲ ಪಂದ್ಯಕ್ಕೆ ಅಲಭ್ಯರಾದರೆ ಭಾರತ ತಂಡದ ನಾಯಕರಾಗಿ ಜಸ್ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ ಎಂದು ಗಂಭೀರ್ ತಿಳಿಸಿದ್ದಾರೆ. ಅದರಂತೆ ರೋಹಿತ್ ಅಲಭ್ಯರಾದರೆ, ಟೀಮ್ ಇಂಡಿಯಾವನ್ನು ಬುಮ್ರಾ ಮುನ್ನಡೆಸುವುದು ಖಚಿತವಾಗಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಈ ಸರಣಿ ಮೊದಲ ಪಂದ್ಯ ಪರ್ತ್ನಲ್ಲಿ ನಡೆದರೆ, ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ. ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಡಿಸೆಂಬರ್ 26 ರಿಂದ ಮೆಲ್ಬೋರ್ನ್ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ನಡೆಯಲಿದ್ದು, ಸಿಡ್ನಿಯಲ್ಲಿ ಜರುಗಲಿರುವ ಕೊನೆಯ ಟೆಸ್ಟ್ ಪಂದ್ಯ ಜನವರಿ 3 ರಿಂದ ಆರಂಭವಾಗಲಿದೆ