ಬಾಂಗ್ಲಾ-ಭಾರತ ನಡುವಿನ ಟೆಸ್ಟ್ ಚಾಂಪಿಯನ್ಶಿಪ್ನ ಪಂದ್ಯಗಳು ಇಂದಿನಿಂದ ಆರಂಭವಾಗಲಿದೆ. ಭಾರತ ಮತ್ತು ಬಾಂಗ್ಲಾದೇಶ ತಮಡಗಳು ಮತ್ತೊಂದು ಟೆಸ್ಟ್ ಕ್ರಿಕೆಟ್ ಸರಣಿ ಆಡಲು ಸಜ್ಜಾಗಿವೆ. ವೈಟ್ಬಾಲ್ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾಗೆ ಬಾಂಗ್ಲಾದೇಶ ತಂಡ ಜಿದ್ದಾಜಿದ್ದಿನ ಪೈಪೋಟಿ ನೀಡುತ್ತಾ ಬಂದಿದೆ. ಈಗ ರೆಡ್ ಬಾಲ್ ಕ್ರಿಕೆಟ್ನಲ್ಲೂ ಅಂಥದ್ದೇ ಜಟಾಪಟಿ ನಿರೀಕ್ಷೆ ಮಾಡಬಹುದಾಗಿದೆ.
ಬಿಜೆಪಿ ಶಾಸಕನಿಗೆ ಬಿಗ್ ಶಾಕ್: ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್ ದಾಖಲು!
ಸರಣಿಯ ಮೊದಲ ಟೆಸ್ಟ್ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆರಂಭವಾಗಲಿದೆ.
ಉಭಯ ತಂಡಗಳಿಗೆ ಈ ಸರಣಿಯು ತುಂಬಾ ಮಹತ್ವದ್ದು. ಅದರಲ್ಲೂ ಭಾರತ ತಂಡವು ಈ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ ಆಡುವುದು ಬಹುತೇಕ ಖಚಿತವಾಗಲಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಭರ್ಜರಿ ಜಯ ಸಾಧಿಸುವ ಇರಾದೆಯೊಂದಿಗೆ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ
ಮತ್ತೊಂದೆಡೆ ಪಾಕಿಸ್ತಾನ್ ತಂಡದ ವಿರುದ್ಧದ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದಿರುವ ಬಾಂಗ್ಲಾದೇಶ್ ತಂಡವು ಇದೀಗ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ರೇಸ್ನಲ್ಲಿದೆ. ಹೀಗಾಗಿ ಭಾರತದ ವಿರುದ್ಧದ ಸರಣಿಯನ್ನು ಗೆಲ್ಲುವ ಮೂಲಕ ಡಬ್ಲ್ಯೂಟಿಸಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರುವ ವಿಶ್ವಾಸದಲ್ಲಿದೆ.