ಭಾರತ ತಂಡದ ಸ್ಪಿನ್ ಆಲ್ರೌಂಡರ್ ರವಿಚಂದ್ರನ್ ಅಶ್ವಿನ್ ಅವರು ಬಾಂಗ್ಲಾದೇಶ ವಿರುದ್ಧ ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ್ದಾರೆ. ಆ ಮೂಲಕ ತವರು ಅಭಿಮಾನಿಗಳ ಎದುರು ಟೆಸ್ಟ್ ವೃತ್ತಿ ಜೀವನದಲ್ಲಿ ಆರನೇ ಶತಕವನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಟೂರ್ನಿಯಲ್ಲಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ.
ಪ್ರಸ್ತುತ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನಲ್ಲಿ 1000 ರನ್ಗಳು ಹಾಗೂ 100 ವಿಕೆಟ್ಗಳನ್ನು ಪಡೆದ ವಿಶ್ವದ ಎರಡನೇ ಕ್ರಿಕೆಟಿಗ ಎಂಬ ಸಾಧನೆಗೆ ಅಶ್ವಿನ್ ಭಾಜನರಾಗಿದ್ದಾರೆ. ಇದಕ್ಕೂ ಮುನ್ನ ಭಾರತ ತಂಡದ ಮತ್ತೊರ್ವ ಸ್ಪಿನ್ ಆಲ್ರೌಂಡರ್ ಆರ್ ಜಡೇಜಾ ಅವರು ಈ ಸಾಧನೆ ಮಾಡಿದ್ದರು. ಇದೀಗ ಸಾಧಕರ ಪಟ್ಟಿಗೆ ಆರ್ ಅಶ್ವಿನ್ ಸೇರ್ಪಡೆಯಾಗಿದ್ದಾರೆ. ಪ್ರಥಮ ಇನಿಂಗ್ಸ್ನಲ್ಲಿ 52 ರನ್ ಗಳಿಸುತ್ತಿದ್ದಂತೆ ಅಶ್ವಿನ್ ಈ ಸಾಧನೆಗೆ ಭಾಜನರಾದರು. ಅಂದ ಹಾಗೆ ಅಶ್ವಿನ್ ಅವರು ಟೆಸ್ಟ್ ಚಾಂಪಿಯನ್ಷಿಪ್ನಲ್ಲಿ 174 ವಿಕೆಟ್ಗಳನ್ನು ಕಬಳಿಸಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನಲ್ಲಿ ಆಸ್ಟ್ರೇಲಿಯಾದ ಹಿರಿಯ ಸ್ಪಿನ್ನರ್ ನೇಥನ್ ಲಯಾನ್ ಅವರು 187 ವಿಕೆಟ್ಗಳನ್ನು ಪಡೆಯುವ ಮೂಲಕ ಅಗ್ರ ಸ್ಥಾನದಲ್ಲಿದ್ದಾರೆ. ಆರ್ ಅಶ್ವಿನ್ ಸದ್ಯ 174 ವಿಕೆಟ್ಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದಾರೆ.