ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರಿದ ರವೀಂದ್ರ ಜಡೇಜಾ ಅವರು, ದಿಗ್ಗಜರ ದಾಖಲೆ ಉಡೀಸ್ ಮಾಡಿದ್ದಾರೆ.
V Somanna: ಶಕ್ತಿ ಯೋಜನೆ ಪರಿಷ್ಕರಣೆ ವಿಚಾರ: ಸಚಿವ ವಿ.ಸೋಮಣ್ಣ ಹೇಳಿದ್ದೇನು..?
ಭಾರತ ತಂಡವು ಮೂರನೇ ಟೆಸ್ಟ್ ಪಂದ್ಯದಲ್ಲಿ 235 ರನ್ಗಳಿಗೆ ನ್ಯೂಜಿಲೆಂಡ್ ತಂಡ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಕಿವೀಸ್ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ಟೀಂ ಇಂಡಿಯಾ ಸ್ಪಿನ್ನರ್ ರವೀಂದ್ರ ಜಡೇಜಾ 5 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು.
ರವೀಂದ್ರ ಜಡೇಜಾ ಖಾತೆಗೆ ಜಾರಿದ ಬಿದ್ದ ವಿಕೆಟ್ಗಳ ಪೈಕಿ, ವಿಲ್ ಯಂಗ್, ಟಾಮ್ ಬ್ಲಂಡೆಲ್, ಗ್ಲೆನ್ ಫಿಲಿಪ್ಸ್, ಇಶ್ ಸೋಧಿ ಹಾಗೂ ಮ್ಯಾಟ್ ಹೆನ್ರಿ ಸೇರಿದ್ದಾರೆ. ದಿನದಾಟದ ಮೊದಲೆರಡು ಸೆಷನ್ಗಳಲ್ಲಿ ಮೂರು ವಿಕೆಟ್ ಉರುಳಿಸಿದ್ದ ಜಡೇಜಾ, ಚಹಾ ವಿರಾಮದ ಮೊದಲು ಗ್ಲೆನ್ ಫಿಲಿಪ್ಸ್ ಅವರ ವಿಕೆಟ್ ಉರುಳಿಸಿದರು. ಈ ಮೂಲಕ ಜಡೇಜಾ ವಿಶಿಷ್ಟ ದಾಖಲೆಯನ್ನು ಮಾಡಿದರು.
ಗ್ಲೆನ್ ಫಿಲಿಪ್ಸ್ ಅವರ ವಿಕೆಟ್ ಉರುಳಿಸುವ ಮೂಲಕ ರವೀಂದ್ರ ಜಡೇಜಾ, ಭಾರತ ಪರ ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ವಿಕೆಟ್ಗಳನ್ನು ಕಬಳಿಸಿದ ಬೌಲರ್ಗಳ ಪೈಕಿಯಲ್ಲಿ ಇದೀಗ ಐದನೇ ಸ್ಥಾನಕ್ಕೆ ಬಂದಿದ್ದಾರೆ. ಈ ಮೂಲಕ ಜಡೇಜಾ, ಜಹೀರ್ ಖಾನ್ ಮತ್ತು ಇಶಾಂತ್ ಶರ್ಮಾ ಅವರನ್ನೂ ಸಹ ಹಿಂದಿಕ್ಕಿದ್ದಾರೆ.