ರಾಜ್ಯದಲ್ಲಿ ಮುಂದಿನ 4 ದಿನಗಳವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲೂ ಬೆಂಗಳೂರಿನ ಸುತ್ತ ಮುತ್ತ ನಾಳೆಯಿಂದ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಇತ್ತ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆಯಿಂದ ನ್ಯೂಜಿಲೆಂಡ್ ತಂಡವನ್ನು ಎದುರಿಸಲು ರೋಹಿತ್ ಪಡೆ ಸಜ್ಜಾಗಿದ್ದು ಈಗಾಗಲೇ ಕಳೆದರಡು ದಿನಗಳಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ.
ನಿರಂತರವಾಗಿ ಮಳೆಯಾಗುತ್ತಿದ್ದು, ಎಲ್ಲಾ ಅಧಿಕಾರಿಗಳು ಸನ್ನದ್ಧರಾಗಿ ಕಾರ್ಯನಿರ್ವಹಿಸಲು ಸೂಚನೆ: ತುಷಾರ್ ಗಿರಿ ನಾಥ್
ಭಾರತೀಯ ಹವಾಮಾನ ಇಲಾಖೆ ವರದಿಯ ಪ್ರಕಾರ ಈ ವಾರವಿಡೀ ಬೆಂಗಳೂರು ಮಹಾನಗರ ದಲ್ಲಿ ಮಳೆ ಸುರಿಯಲಿದೆ. ಅದರಲ್ಲೂ ಪಂದ್ಯ ಪ್ರಾರಂಭವಾಗಲಿರುವ ಬುಧವಾರ ಮತ್ತು 2ನೇ ದಿನವಾದ ಗುರುವಾರದಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಶುಕ್ರವಾರವಂತೂ ಮತ್ತಷ್ಟು ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಭಾರತ vs ನ್ಯೂಝಿಲೆಂಡ್ ನಡುವಣ ಪಂದ್ಯದ ಮೊದಲ ದಿನದಾಟವು ಸಂಪೂರ್ಣ ಮಳೆಗೆ ಅಹುತಿಯಾಗಲಿದೆ. ಇನ್ನು ಎರಡನೇ ದಿನದಾಟದ ವೇಳೆ ಶೇ.80 ರಷ್ಟು ಮಳೆಯಾಗಲಿದೆ. ಹಾಗೆಯೇ ಮೂರನೇ ಮತ್ತು ನಾಲ್ಕನೇ ದಿನದಾಟದ ಅವಧಿಯಲ್ಲಿ ಶೇ.60 ರಷ್ಟು ಮಳೆಯಾಗುವ ಸಂಭವನೀಯತೆ ಇದೆ. ಅದೇ ರೀತಿ ಕೊನೆಯ ದಿನದಾಟದ ವೇಳೆ ಶೇ.70 ರಷ್ಟು ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತ್ಯಾಧುನಿಕ ಸಬ್ ಏರ್ ಸಿಸ್ಟಂ ಹೊಂದಿದ್ದು, ಇದು ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಮಳೆ ಬಂದು ನಿಂತರೆ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು.