ಹಂಪಿ : ವಿದೇಶಿ ಮಹಿಳೆ ಮತ್ತು ಹೋಮ್ ಸ್ಟೇ ಮಾಲೀಕೆ ಮೇಲೆ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಕಳೆದ ವಾರ ಹಂಪಿ ಉತ್ಸವದ ಸಂದರ್ಭದಲ್ಲಿ ಮೂವರು ಯುವಕರ ಗುಂಪೊಂದು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದೆ ಎನ್ನಲಾಗಿದೆ.
ಯುವಕರು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವುದನ್ನು ನೋಡಿ, ಆಟೋರಿಕ್ಷಾ ಚಾಲಕನೊಬ್ಬ ಆಕೆಯ ರಕ್ಷಣೆಗೆ ಧಾವಿಸಿದ. ಆದರೆ ಯುವಕರು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದರು, ಆತನ ಮೂಗಿನಿಂದ ರಕ್ತ ಹರಿಯಿತು. ಯುವಕರನ್ನು ವಶಕ್ಕೆ ಪಡೆದ ಹಂಪಿ ಪೊಲೀಸರು, ಆಟೋ ಚಾಲಕನ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ಸೆಕ್ಷನ್ 109 ರ ಅಡಿಯಲ್ಲಿ ಪ್ರಕರಣ ದಾಖಲಿಸಿದರು. ಇಸ್ರೇಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯುವಕರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಲಿಲ್ಲ, ಆದರೂ ಆಕೆಯನ್ನು ಆಟೋ ಚಾಲಕನ ಜೊತೆಗೆ ಠಾಣೆಗೆ ಕರೆದೊಯ್ಯಲಾಯಿತು ಎಂದು ವರದಿಯಾಗಿದೆ.