ಚಿಕ್ಕೋಡಿ : ಗ್ರಾಮಲೆಕ್ಕಾಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ ಎರಡನೇ ದಿನವೂ ಮುಂದುವರೆದಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಲೆಕ್ಕಾಧಿಕಾರಿಗಳು ಹೋರಾಟ ನಡೆಸುತ್ತಿದ್ದು, ಕರ್ತವ್ಯಕ್ಕೆ ಗೈರಾಗಿ ಪ್ರತಿಭಟನೆಗಿಳಿದಿದ್ದಾರೆ.
ವಿವಿಧ ಬೇಡಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಗ್ರಾಮಲೆಕ್ಕಾಧಿಕಾರಿಗಳು ಧರಣಿ ಕುಳಿದ್ದು, ಪೀಠೋಪಕರಣ, ಅಂತರ ಜಿಲ್ಲಾ ವರ್ಗಾವಣೆ ಸುಸಜ್ಜಿತವಾದ ಕಟ್ಟಡ ನಿರ್ಮಾಣ, ಕೆಲಸದ ಹೊರೆ ಕಡಿಮೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ.