ಇಂದು ಭಾರತ ಮತ್ತು ಅಫ್ಘಾನಿಸ್ತಾನ್ ಮುಖಾಮುಖಿ ಆಗಲಿದೆ. ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ದ್ವಿತಿಯ ಸುತ್ತಿನಲ್ಲಿ ಶುಭಾರಂಭ ಮಾಡುವ ಇರಾದೆಯಲ್ಲಿದೆ ಉಭಯ ತಂಡಗಳು.
ಟಿ20 ಕ್ರಿಕೆಟ್ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಒಟ್ಟು 8 ಬಾರಿ ಮುಖಾಮುಖಿಯಾಗಿದೆ. ಈ ವೇಳೆ 7 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿದೆ. ಇದೀಗ ಟಿ20 ವಿಶ್ವಕಪ್ನ ದ್ವಿತೀಯ ಸುತ್ತಿನಲ್ಲಿ ಉಭಯ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲು ಸಜ್ಜಾಗಿ ನಿಂತಿದೆ
ಪಂದ್ಯವು ಎರಡೂ ತಂಡಗಳಿಗೂ ತುಂಬಾ ಮಹತ್ವದ್ದು, ಏಕೆಂದರೆ ಉಭಯ ತಂಡಗಳು ಮುಂಬರುವ ಪಂದ್ಯಗಳಲ್ಲಿ ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ತಂಡಗಳನ್ನು ಎದುರಿಸಬೇಕಿದೆ. ಹೀಗಾಗಿ ಮೊದಲ ಪಂದ್ಯದಲ್ಲೇ ಗೆಲ್ಲುವ ಮೂಲಕ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ.
ಬಾರ್ಬಡೋಸ್ನಲ್ಲಿ ನಡೆಯಲಿರುವ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಪಂದ್ಯವು ಹಗಲಿನಲ್ಲಿ ನಡೆಯಲಿದ್ದು, ಬೆಳಿಗ್ಗೆ 10.30 ರಿಂದ ಶುರುವಾಗಲಿದೆ. ಅಂದರೆ ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ನೇರ ಪ್ರಸಾರ ಇರಲಿದೆ.
ಭಾರತ-ಅಫ್ಘಾನಿಸ್ತಾನ್ ನಡುವಣ ಈ ಪಂದ್ಯದ ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ ಕನ್ನಡ ಸೇರಿದಂತೆ ಸ್ಟಾರ್ ನೆಟ್ವರ್ಕ್ನ ಸ್ಪೋರ್ಟ್ಸ್ ಚಾನೆಲ್ಗಳಲ್ಲಿ ಇರಲಿದೆ.