Facebook Twitter Instagram YouTube
    ಕನ್ನಡ     English     తెలుగు
    Sunday, January 29
    Facebook Twitter Instagram YouTube
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ     English     తెలుగు
    Facebook Twitter Instagram YouTube
    Home » ಭಾರತ-ಬಾಂಗ್ಲಾದೇಶ ಪಂದ್ಯಕ್ಕೆ ಕ್ಷಣಗಣನೆ: ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾದ ಟೀಂ ಇಂಡಿಯಾ

    ಭಾರತ-ಬಾಂಗ್ಲಾದೇಶ ಪಂದ್ಯಕ್ಕೆ ಕ್ಷಣಗಣನೆ: ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾದ ಟೀಂ ಇಂಡಿಯಾ

    AIN AdminBy AIN AdminDecember 7, 2022
    Share
    Facebook Twitter LinkedIn Pinterest Email

    ಮೊದಲ ಏಕದಿನದಲ್ಲಿ ಹೀನಾಯ ಸೋಲು ಅನುಭವಿಸಿದ ಭಾರತ, ಬಾಂಗ್ಲಾದೇಶ ವಿರುದ್ಧ ಬುಧವಾರ 2ನೇ ಏಕದಿನ ಪಂದ್ಯವನ್ನಾಡಲಿದ್ದು ಸರಣಿ ಸೋಲಿನಿಂದ ಪಾರಾಗಬೇಕಾದ ಒತ್ತಡದಲ್ಲಿದೆ. ಭಾರತ 2015ರಲ್ಲಿ ಕೊನೆ ಬಾರಿ ಪ್ರವಾಸ ಕೈಗೊಂಡಾಗ ಏಕದಿನ ಸರಣಿಯನ್ನು 2-1ರಲ್ಲಿ ಗೆದ್ದಿದ್ದ ಬಾಂಗ್ಲಾ, ತವರಿನಲ್ಲಿ ಭಾರತ ವಿರುದ್ಧ ಸತತ 2ನೇ ಸರಣಿ ಗೆಲುವು ಸಾಧಿಸುವ ತವಕದಲ್ಲಿದೆ.

    ಮೊದಲ ಪಂದ್ಯದಲ್ಲಿ ಭಾರತ ನಾಲ್ವರು ಆಲ್ರೌಂಡರ್‌ಗಳೊಂದಿಗೆ ಕಣಕ್ಕಿಳಿದಿತ್ತು. ಬಹುತೇಕರು ಉತ್ತಮ ಬೌಲಿಂಗ್‌ ನಡೆಸಿದ್ದರು. ಬ್ಯಾಟಿಂಗ್‌ನಲ್ಲಿ ಮೂವರೂ ಒಂದಂಕಿ ಮೊತ್ತಕ್ಕೆ ಔಟಾಗಿದ್ದರು. ಒಂದು ಫಲಿತಾಂಶದಿಂದ ತಂಡದ ಸಂಯೋಜನೆಯ ಬಗ್ಗೆ ವಿಶ್ಲೇಷಿಸುವುದು ಕಷ್ಟವಾದರೂ, ಈ ಪಂದ್ಯದಲ್ಲಿ ಭಾರತ ಒಬ್ಬ ಹೆಚ್ಚುವರಿ ಬ್ಯಾಟರ್‌ನೊಂದಿಗೆ ಆಡುವ ಸಾಧ್ಯತೆ ಇದೆ. ಈ ಸ್ಥಾನಕ್ಕೆ ಇಶಾನ್‌ ಕಿಶನ್‌, ರಜತ್‌ ಪಾಟಿದಾರ್‌ ಹಾಗೂ ರಾಹುಲ್‌ ತ್ರಿಪಾಠಿ ನಡುವೆ ಪೈಪೋಟಿ ಇದೆ. ಆರಂಭಿಕ ಬ್ಯಾಟರ್‌ ಶಿಖರ್‌ ಧವನ್‌ ಸತತವಾಗಿ ವೈಫಲ್ಯ ಅನುಭವಿಸುತ್ತಿದ್ದು ಅವರನ್ನು ಹೊರಗಿಡುವ ಬಗ್ಗೆಯೂ ತಂಡದ ಆಡಳಿತ ಯೋಚಿಸಬಹುದು.

    Demo

    ಟೀಂ ಇಂಡಿಯಾ ಪರ ಕೆ ಎಲ್ ರಾಹುಲ್ ಹೊರತುಪಡಿಸಿ ಉಳಿದ್ಯಾವ ಬ್ಯಾಟರ್‌ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬಂದಿರಲಿಲ್ಲ. ಹೀಗಾಗಿ ಎರಡನೇ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಜವಾಬ್ದಾರಿಯುತ ಪ್ರದರ್ಶನ ತೋರಬೇಕಿದೆ. ಇನ್ನು ಶೆಹಬಾಜ್ ಅಹಮ್ಮದ್ ಬದಲಿಗೆ ಇಂದಿನ ಪಂದ್ಯದಲ್ಲಿ ಅಕ್ಷರ್ ಪಟೇಲ್ ಆಡುವ ಹನ್ನೊಂದರ ಬಳಗ ಕೂಡಿಕೊಳ್ಳುವ ಸಾಧ್ಯತೆಯಿದೆ.

    ಬಾಂಗ್ಲಾದೇಶ ತಂಡದಲ್ಲಿ ಯಾವುದೇ ಬದಲಾವಣೆ ಆಗುವ ನಿರೀಕ್ಷೆ ಇಲ್ಲ. ಈ ಪಂದ್ಯದಲ್ಲೂ ಸ್ಪಿನ್ನರ್‌ಗಳಿಗೆ ಹೆಚ್ಚಿನ ನೆರವು ಸಿಗುವ ನಿರೀಕ್ಷೆ ಇದೆ. ಟಾಸ್‌ ಗೆಲ್ಲುವ ತಂಡ ಮೊದಲು ಫೀಲ್ಡ್‌ ಮಾಡಲು ನಿರ್ಧರಿಸುವ ಸಾಧ್ಯತೆ ಹೆಚ್ಚು. ಅನುಭವಿ ಸ್ಪಿನ್ನರ್ ಶಕೀಬ್ ಅಲ್ ಹಸನ್, ಮೊದಲ ಏಕದಿನ ಪಂದ್ಯದಲ್ಲಿ ಪ್ರಮುಖ 5 ವಿಕೆಟ್ ಕಬಳಿಸುವ ಮೂಲಕ ಬಾಂಗ್ಲಾದೇಶ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದರು. ಇದೀಗ ಶಕೀಬ್ ಮತ್ತೊಮ್ಮೆ ಟೀಂ ಇಂಡಿಯಾ ಬ್ಯಾಟರ್‌ಗಳನ್ನು ಕಾಡುವ ವಿಶ್ವಾಸದಲ್ಲಿದ್ದಾರೆ.

     

    Share. Facebook Twitter LinkedIn Email WhatsApp

    Related Posts

    Axar Patel.. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಆಲ್ ರೌಂಡರ್ ಅಕ್ಷರ್ ಪಟೇಲ್..!

    January 29, 2023

    Women’s Premier League.. 5 ತಂಡಗಳ ಹರಾಜಿನ ಮೂಲಕ 4669.99 ಕೋಟಿ ರೂ. ಗಳಿಸಿದ BCCI

    January 28, 2023

    ರಣಜಿ ಟ್ರೋಫಿ ಟೂರ್ನಿಯಲ್ಲಿ ಮತ್ತೊಮ್ಮೆ ಉತ್ತಮ ಆರಂಭ ಪಡೆದ ಕರ್ನಾಟಕ

    January 27, 2023

    Hockey World Cup.. ಇಂದು ಬೆಲ್ಜಿಯಂ-ನೆದರ್ ಲೆಂಡ್ಸ್ ಹೋರಾಟ: ಆಸ್ಟ್ರೇಲಿಯಾಗೆ ಜರ್ಮನಿ ಸವಾಲು

    January 27, 2023

    ಮೇರಿ ನೇತೃತ್ವದ ಸಮಿತಿ ಬಗ್ಗೆ ಕುಸ್ತಿಪಟುಗಳ ಬೇಸರ..!

    January 27, 2023

    Australian Open.. ಆಸ್ಪ್ರೇಲಿಯನ್ ಓಪನ್ ಟೂರ್ನಿಯಲ್ಲಿ ವಿಕ್ಟೋರಿಯಾ ಅಜರೆಂಕಾ ಸೆಮೀಸ್ ಪ್ರವೇಶ

    January 27, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.