ಐಫೋನ್ಗಳನ್ನು ತಯಾರಿಸುವ ಪ್ರತಿಷ್ಠಿತ ಆ್ಯಪಲ್ ಕಂಪನಿಗೆ ಸಿಎಫ್ಒ ಆಗಿ ಭಾರತ ಮೂಲದ ಕೇವನ್ ಪರೇಖ್ ನೇಮಕವಾಗಿದ್ದಾರೆ. ಪ್ರಸಕ್ತ ಸಿಎಫ್ಒ ಆಗಿರುವ ಲೂಕಾ ಪರೇಖ್ ಆ ಸ್ಥಾನದಲ್ಲಿ ಡಿಸೆಂಬರ್ 31ರವರೆಗೂ ಮುಂದುವರಿಯಲಿದ್ದಾರೆ. ಪರೇಖ್ ಅವರು ಹತ್ತಕ್ಕೂ ಹೆಚ್ಚು ವರ್ಷಗಳ ಹಿಂದೆ ಆ್ಯಪಲ್ ಸೇರಿದ್ದರು. ಅದಕ್ಕೂ ಮುನ್ನ ಥಾಮ್ಸನ್ ರಾಯ್ಟರ್ಸ್ ಮತ್ತು ಜನರಲ್ ಮೋಟಾರ್ಸ್ನಲ್ಲಿ ಕೆಲಸ ಮಾಡಿದ್ದರು.
ವಿಶ್ವದ ಅತ್ಯಂತ ಪ್ರತಿಷ್ಠಿತ ಸ್ಮಾರ್ಟ್ಫೋನ್ ಕಂಪನಿಯಾದ ಆ್ಯಪಲ್ಗೆ ಚೀಫ್ ಫೈನಾನ್ಷಿಯಲ್ ಆಫೀಸರ್ ಆಗಿ ಭಾರತ ಮೂಲದ ಕೇವನ್ ಪರೇಖ್ ನೇಮಕವಾಗಿದ್ದಾರೆ. ಲ್ಯೂಕಾ ಮೇಸ್ಟ್ರಿ ಅವರ ಸ್ಥಾನವನ್ನು ಪರೇಖ್ ತುಂಬಲಿದ್ದಾರೆ. ಲೂಕಾ ಅವರು ಸಿಎಫ್ಒ ಸ್ಥಾನದಿಂದ ಹೊರಹೋಗುತ್ತಾರಾದರೂ ಆ್ಯಪಲ್ ಕಂಪನಿಯಲ್ಲಿ ಅವರು ಬೇರೆ ಜವಾಬ್ದಾರಿಗಳೊಂದಿಗೆ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕೇವನ್ ಪರೇಖ್ 10ಕ್ಕೂ ಹೆಚ್ಚು ವರ್ಷಗಳಿಂದ ಆ್ಯಪಲ್ ಕಂಪನಿಯಲ್ಲೇ ಕೆಲಸ ಮಾಡಿದ್ದಾರೆ. ಆ್ಯಪಲ್ ಸೇರುವ ಮುನ್ನ ಅವರು ಥಾಮ್ಸನ್ ರಾಯ್ಟರ್ಸ್ ಮತ್ತು ಜನರಲ್ ಮೋಟಾರ್ಸ್ ಸಂಸ್ಥೆಗಳಲ್ಲಿ ಹಿರಿಯ ಹುದ್ದೆ ನಿಭಾಯಿಸಿದ್ದರು. ಸದ್ಯ ಅವರು ಆ್ಯಪಲ್ ಕಂಪನಿ ಫೈನಾನ್ಷಿಯಲ್ ಪ್ಲಾನಿಂಗ್ ಅಂಡ್ ಅನಾಲಿಸಿಸ್ ವಿಭಾಗದ ವೈಸ್ ಪ್ರೆಸಿಡೆಂಟ್ ಆಗಿ ಕೆಲಸ ಮಾಡಿದ್ದಾರೆ. ಅವರನ್ನು ಸಿಎಫ್ಒ ಆಗಿ ನೇಮಕ ಮಾಡುವುದು ಕೆಲ ಕಾಲದ ಹಿಂದೆಯೇ ನಿಶ್ಚಿತವಾಗಿತ್ತು ಎಂದೂ ಹೇಳಲಾಗುತ್ತಿದೆ.
2024ರ ಡಿಸೆಂಬರ್ 31ರವರೆಗೂ ಅದೇ ಸ್ಥಾನದಲ್ಲಿ ಮುಂದುವರಿದು ಆ ಬಳಿಕ ಹುದ್ದೆಯನ್ನು ಕೇವನ್ ಪರೇಖ್ ಅವರಿಗೆ ಬಿಟ್ಟು ಕೊಡಲಿದ್ದಾರೆ. ಆ ಬಳಿಕ ಇನ್ಫಾರ್ಮೇಶನ್ ಸಿಸ್ಟಮ್ಸ್ ಮತ್ತ ಟೆಕ್ನಾಲಜಿ, ಇನ್ಫಾರ್ಮೇಶನ್ ಸೆಕ್ಯೂರಿಟಿ, ರಿಯಲ್ ಎಸ್ಟೇಟ್ ಡೆವಲಪ್ಮೆಂಟ್ ಸೇರಿದಂತೆ ವಿವಿಧ ಕಾರ್ಪೊರೇಟ್ ಸರ್ವಿಸ್ ಟೀಮ್ಗಳನ್ನು ಮುನ್ನಡೆಸುವ ಜವಾಬ್ದಾರಿಯನ್ನು ಮುಂದುವರಿಸಿಕೊಂಡು ಹೋಗಲಿದ್ದಾರೆ.