ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯನ್ನು ಜನವರಿ 23 ರಿಂದ ಆರಂಭಗೊಂಡಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿರುವ ಭಾರತ ತಂಡದಲ್ಲಿ ಅಕ್ಷರ್ ಪಟೇಲ್ ಉಪನಾಯಕರಾಗಿ ಆಯ್ಕೆಯಾಗಿದ್ದು, ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ.
ಇನ್ನೂ ಐದು ಪಂದ್ಯಗಳ ಟಿ20 ಸರಣಿಯ 2ನೇ ಮ್ಯಾಚ್ ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಶುರುವಾಗಲಿದೆ. ಇದಕ್ಕೂ ಮುನ್ನ ರಾತ್ರಿ 6.30 ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಈ ಸರಣಿಯ ಎಲ್ಲಾ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ ಚಾನೆಲ್ನಲ್ಲಿ ನೇರ ಪ್ರಸಾರವಾಗಲಿದೆ. ಹಾಗೆಯೇ ಡಿಸ್ನಿ ಹಾಟ್ ಸ್ಟಾರ್ ಆ್ಯಪ್ ಹಾಗೂ ವೆಬ್ಸೈಟ್ಗಳಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.
Hibiscus Benefits: ದಾಸವಾಳ ಹೂವು ಪೂಜೆಗೆ ಮಾತ್ರವಲ್ಲ, ಕೂದಲು-ಚರ್ಮದ ಆರೋಗ್ಯಕ್ಕೂ ಬೇಕು!
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪಾನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೇಲ್ (ವಿಕೆಟ್ ಕೀಪರ್).
ಇಂಗ್ಲೆಂಡ್ ಟಿ20 ತಂಡ: ಜೋಸ್ ಬಟ್ಲರ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕಬ್ ಬೆಥೆಲ್, ಹ್ಯಾರಿ ಬ್ರೂಕ್ (ಉಪನಾಯಕ), ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜಾಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.