ಕೇಪ್ಟೌನ್: ದಕ್ಷಿಣ ಆಫ್ರಿಕಾ (South Africa) ವಿರುದ್ಧ ಗುರುವಾರ ನಡೆದ ಅಂತಿಮ ಟೆಸ್ಟ್ ಪಂದ್ಯದ ಬಳಿಕ ಟೀಂ ಇಂಡಿಯಾ ವಿಶ್ವಟೆಸ್ಟ್ ಚಾಂಪಿಯನ್ಶಿಪ್ನ ಪಾಯಿಂಟ್ಸ್ (WTC Points) ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಜಿಗಿದಿದೆ.
2019-2023ರ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಆಸೀಸ್ ವಿರುದ್ಧ ಹೀನಾಯವಾಗಿ ಸೋತಿದ್ದ ಭಾರತ (Team India) ಸತತ 2ನೇ ಬಾರಿಗೆ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಇದೀಗ 3ನೇ ಆವೃತ್ತಿಗೆ ಸಜ್ಜಾಗಿರುವ ಭಾರತ ಈಗಾಗಲೇ ನಂ.1ಪಟ್ಟಕ್ಕೆ ಜಿಗಿದಿದೆ. ಅಂತಿಮವಾಗಿ ಮೊದಲ ಎರಡು ಸ್ಥಾನಗಳಲ್ಲಿ ಬರುವ ತಂಡಗಳು ಫೈನಲ್ ಪ್ರವೇಶಿಸಲಿವೆ
ಕಳೆದ ವರ್ಷ ವೆಸ್ಟ್ ಇಂಡೀಸ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನಾಡುವ ಮೂಲಕ ತನ್ನ ಸರದಿ ಆರಂಭಿಸಿತು. ವೆಸ್ಟ್ ಇಂಡೀಸ್ ವಿರುದ್ಧ 2 ಟೆಸ್ಟ್ನಲ್ಲಿ ಗೆಲುವು ಸಾಧಿಸಿ ಸರಣಿ ಕೈವಶ ಮಾಡಿಕೊಂಡಿದ್ದ ಭಾರತ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಗೆಲುವನ್ನು ಹಂಚಿಕೊಂಡಿದೆ. ಈ ಮೂಲಕ 26 ಅಂಕಗಳು 54.16 ಪಿಸಿಟಿಯೊಂದಿಗೆ (Percentage Of Points Earned) ಅಗ್ರಸ್ಥಾನಕ್ಕೆ ಜಿಗಿದಿದೆ.