ಬೆಂಗಳೂರು:– ಬುಧವಾರ ಮುಂಬೈನ ವಾಂಖೆಡೆಯಲ್ಲಿ ನಡೆದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸದೆಬಡಿದು 70 ರನ್ ಗಳಿಂದ ಗೆಲುವು ಸಾಧಿಸಿರುವ ಭಾರತ ತಂಡಕ್ಕೆ ವಿಧಾನ ಪರಿಷತ್ ಸದಸ್ಯ ಟಿಎ ಶರವಣ ಅವರು ಶುಭ ಹಾರೈಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಶರವಣ ಅವರು, ಎಂತಹ ಸೊಗಸಾದ ಪಂದ್ಯ!. ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಫೈನಲ್ಗೆ ಲಗ್ಗೆ ಇಟ್ಟಿದೆ.
ಇದು ತುಂಬಾ ಖುಷಿ ಹಾಗೂ ಹೆಮ್ಮೆಯ ವಿಚಾರ. ಫೈನಲ್ ಗೆ ಲಗ್ಗೆ ಇಟ್ಟ ಭಾರತ ತಂಡಕ್ಕೆ ನನ್ನ ಶುಭ ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಇನ್ನೂ ಮುಂಬೈನ ವಾಂಖೆಡೆಯಲ್ಲಿ ನಿನ್ನೆ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ 70 ರನ್ ಗಳ ಅಂತರದಿಂದ ಗೆಲುವು ಸಾಧಿಸಿದ್ದು, ಫೈನಲ್ ಗೆ ಲಗ್ಗೆ ಇಟ್ಟಿದೆ.