ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡ ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ ಅವರು ‘ನೇಪಾಳ ಮತ್ತು ಭಾರತದ ನಡುವಿನ ಸಂಬಂಧ ಮತ್ತಷ್ಟು ವೃದ್ಧಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಭಾನುವಾರ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ಅಭಿನಂದಿಸಿದ ಬಳಿಕ ಅವರು ಕೆಲ ಸಮಯ ಮೋದಿ ಜೊತೆ ಮಾತುಕತೆ ನಡೆಸಿದರು.
![Demo](https://ainlivenews.com/wp-content/uploads/2023/12/spoorthi-1.jpg)
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ನೇಪಾಳ-ಭಾರತ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸುವ ಮಾರ್ಗಗಳ ಕುರಿತು ನಾವು ಚರ್ಚಿಸಿದ್ದೇವೆ. ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತದೊಂದಿಗಿನ ನಮ್ಮ ಬಹುಮುಖಿ ಸಂಬಂಧಗಳು ಏಳಿಗೆಯಾಗುತ್ತವೆ ಎಂಬ ವಿಶ್ವಾಸ ನನಗಿದೆ’ ಎಂದು ಬರೆದುಕೊಂಡಿದ್ದಾರೆ.
ಪ್ರಧಾನಿ ಪ್ರಮಾಣ ವಚನ ಸಮಾರಂಭದಲ್ಲಿ ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು, ಬಾಂಗ್ಲಾ ಪ್ರಧಾನಿ ಶೇಖ್ ಹಸಿನಾ, ಬಾಲಿವುಡ್ ತಾರೆಯರು, ಉದ್ಯಮಿಗಳು ಸೇರಿದಂತೆ ಸಾಕಷ್ಟು ಮಂದಿ ಭಾಗಿಯಾಗಿ ಮೋದಿಗೆ ಶುಭ ಹಾರೈಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)