ಭಾರತ-ನ್ಯೂಝಿಲೆಂಡ್ ಪಂದ್ಯಕ್ಕೆ ಮಳೆರಾಯ ಬಿಡುವು ಕೊಟ್ಟಿದ್ದು, ಮೊದಲಿಗೆ ಟಾಸ್ ಗೆದ್ದ ಟೀಮ್ ಇಂಡಿಯಾವು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ನೈಜೀರಿಯಾ: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟ, ತೈಲ ಸಂಗ್ರಹಿಸಲು ಮುಗಿಬಿದ್ದ 140 ಮಂದಿ ದಾರುಣ ಸಾವು
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಬುಧವಾರದಿಂದ ಆರಂಭವಾಗಬೇಕಿದ್ದ ಈ ಪಂದ್ಯದ ಮೊದಲ ದಿನದಾಟವು ಮಳೆಯಿಂದಾಗಿ ರದ್ದಾಗಿತ್ತು.
ಇದೀಗ ಎರಡನೇ ದಿನದಾಟದೊಂದಿಗೆ ಪಂದ್ಯ ಶುರುವಾಗಿದ್ದು, ಅದರಂತೆ ಟಾಸ್ ಗೆದ್ದಿರುವ ಭಾರತ ತಂಡವು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದೆ. ಇನ್ನು ಈ ಪಂದ್ಯದಿಂದ ಟೀಮ್ ಇಂಡಿಯಾದ ಯುವ ಆಟಗಾರ ಶುಭ್ಮನ್ ಗಿಲ್ ಹೊರಗುಳಿದಿದ್ದಾರೆ.
ಕತ್ತು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಶುಭ್ಮನ್ ಗಿಲ್ಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಬದಲಿಗೆ ಮತ್ತೋರ್ವ ಯುವ ದಾಂಡಿಗ ಸರ್ಫರಾಝ್ ಖಾನ್ಗೆ ಆಡುವ ಬಳಗದಲ್ಲಿ ಅವಕಾಶ ನೀಡಲಾಗಿದೆ. ಹಾಗೆಯೇ ಬಾಂಗ್ಲಾದೇಶ್ ವಿರುದ್ಧ ಕಣಕ್ಕಿಳಿದಿದ್ದ ಆಕಾಶ್ ದೀಪ್ ಬದಲಿಗೆ ಕುಲ್ದೀಪ್ ಯಾದವ್ ಸ್ಥಾನ ಪಡೆದಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ರಿಷಭ್ ಪಂತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್.