ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಹೌದು ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲೇ ಭಾರತ, ಆಸ್ಟ್ರೇಲಿಯಾ ವಿರುದ್ಧ 295 ರನ್ಗಳ ಭರ್ಜರಿ ಗೆಲುವು ಕಂಡಿದೆ. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲಿ ಮತ್ತೆ ಮೊದಲ ಸ್ಥಾನಕ್ಕೆ ಜಿಗಿದಿದೆ. ಇದೀಗ ಬರೋಬ್ಬರಿ 47 ವರ್ಷಗಳ ಬಳಿಕ ಹೊಸ ಇತಿಹಾಸ ರಚಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ.
ಜಸ್ಪ್ರೀತ್ ಬುಮ್ರಾ, ಸಿರಾಜ್, ಹರ್ಷಿತ್ ರಾಣಾ ಅವರ ಉರಿ ಚೆಂಡಿನ ವೇಗ ಒಂದುಕಡೆಯಾದ್ರೆ ಯಶಸ್ವಿ ಜೈಸ್ವಾಲ್, ಕಿಂಗ್ ಕೊಹ್ಲಿ, ಕೆ.ಎಲ್ ರಾಹುಲ್ ಅವರ ಬ್ಯಾಟಿಂಗ್ ದರ್ಬಾರ್ನಿಂದ ಭಾರತ, ಆಸೀಸ್ಗೆ ಪವರ್ ಪಂಚ್ ಕೊಟ್ಟಿದೆ. ಈ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಗೆಲುವು ಸಾಧಿಸಿ 1-0 ಮುನ್ನಡೆ ಕಾಯ್ದುಕೊಂಡಿದೆ.
ರೈತರ ಗಮನಕ್ಕೆ.. ಪಿಎಂ ಕಿಸಾನ್ ಯೋಜನೆಯಲ್ಲಿ ಹೊಸ ರೂಲ್ಸ್.! ಈ ಕೆಲಸ ಮಾಡದಿದ್ರೆ ಬರಲ್ಲ 19ನೇ ಕಂತಿನ ಹಣ!?
ಮುಂಬರುವ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ನಲ್ಲಿ ಫೈನಲ್ ಪ್ರವೇಶಿಸಬೇಕಾದರೆ ಸರಣಿಯಲ್ಲಿ 4-0 ಅಂತರದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯನ್ನು ಎದುರಿಸುತ್ತಿರುವ ಟೀಮ್ ಇಂಡಿಯಾ, ಮೊದಲ ಟೆಸ್ಟ್ನಲ್ಲಿ ಸರ್ವಾಂಗೀಣ ಪ್ರದರ್ಶನ ನೀಡುವ ಮೂಲಕ ಬಲಿಷ್ಠ ಆಸ್ಪ್ರೇಲಿಯಾ ತಂಡವನ್ನು ದಿಗ್ಭ್ರಮೆಗೊಳಿಸಿದೆ.
238ಕ್ಕೆ ಆಸೀಸ್ ಆಲೌಟ್:
534 ರನ್ಗಳ ಅಸಾಧಾರಣ ಗುರಿ ಬೆನ್ನಟಿದ ಆಸೀಸ್ 3ನೇ ದಿನದ ಅಂತ್ಯಕ್ಕೆ 12 ರನ್ಗಳಿಗೆ ಪ್ರಮುಖ ಮೂರು ವಿಕೆಟ್ ಕಳೆದುಕೊಂಡಿತ್ತು. 522 ರನ್ಗಳ ಹಿನ್ನಡೆಯೊಂದಿಗೆ ಕ್ರೀಸ್ ಆರಂಭಿಸಿತು. ಮಧ್ಯಮ ಕ್ರಮಾಂಕದಲ್ಲಿ ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ ಅವರ ಹೋರಾಟದ ಹೊರತಾಗಿಯೂ ಆಸೀಸ್ 238 ರನ್ಗಳಿಗೆ ಸರ್ವಪತಕ ಕಂಡಿತು. ಇದರಿಂದ ಭಾರತ 295 ರನ್ಗಳ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಅಂತಿಮವಾಗಿ ಟ್ರಾವಿಸ್ ಹೆಡ್ 89 ರನ್, ಮಿಚೆಲ್ ಮಾರ್ಷ್ 47 ರನ್, ಅಲೆಕ್ಸ್ ಕ್ಯಾರಿ 36 ರನ್ ಗಳಿಸಿದ್ದು ಬಿಟ್ಟರೆ, ಉಳಿದ ಬ್ಯಾಟರ್ಗಳು ಅಲ್ಪಮೊತ್ತಕ್ಕೆ ಔಟಾಗಿ ಪೆವಿಲಿಯನ್ ಸೇರಿಕೊಂಡರು.
ಬುಮ್ರಾ ನಾಯಕನ ಆಟ, ಮಿಂಚಿದ ಯುವ ಬೌಲರ್ಸ್:
ನಾಯಕ ಆಟವಾಡಿದ ವೇಗಿ ಜಸ್ಪ್ರೀತ್ ಬುಮ್ರಾ ತಮ್ಮ ಉರಿ ಚೆಂಡಿನಿಂದ ಪ್ರಮುಖ ವಿಕೆಟ್ಗಳನ್ನು ಕಿತ್ತು ಸೈ ಎನಿಸಿಕೊಂಡರು. ಮೊದಲ ಇನ್ನಿಂಗ್ಸ್ನಲ್ಲಿ 5 ವಿಕೆಟ್, 2ನೇ ಇನ್ನಿಂಗ್ಸ್ನಲ್ಲಿ 10 ವಿಕೆಟ್ ಕಿತ್ತು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು. ಇದರೊಂದಿಗೆ ಯುವ ವೇಗಿಗಳಾದ ಹರ್ಷಿತ್ ರಾಣಾ, ಆಲ್ರೌಂಡರ್ ನಿತೀಶ್ ರೆಡ್ಡಿ, ವಾಷಿಂಗ್ಟನ್ ಸುಂದರ್ ಪ್ರಮುಖ ವಿಕೆಟ್ ಕಿತ್ತು ಮಿಂಚಿದರು.
ಜೈಸ್ವಾಲ್ 4 ಬಾರಿ 150+
ಆಸೀಸ್ ಬೌಲರ್ಗಳನ್ನ ಆಕ್ರಮಣವನ್ನು ದಿಟ್ಟವಾಗಿ ಎದುರಿಸಿದ ಎಡಗೈ ಬ್ಯಾಟರ್ ಜೈಸ್ವಾಲ್, 2ನೇ ಇನ್ನಿಂಗ್ಸ್ನಲ್ಲಿ 161 ರನ್ಗಳಿಗೆ ಔಟಾದರು. ಈ ಮೂಲಕ 23 ವರ್ಷಕ್ಕೆ ಕಾಲಿಡುವ ಮುನ್ನ ನಾಲ್ಕು ಬಾರಿ 150ಕ್ಕೂ ಅಧಿಕ ರನ್ ಗಳಿಸಿದ ಭಾರತದ 2ನೇ ಆಟಗಾರ ಎಂಬ ಶ್ರೇಯಕ್ಕೆ ಜೈಸ್ವಾಲ್ ಪಾತ್ರರಾದರು. ಜೈಸ್ವಾಲ್ಗೂ ಮುನ್ನ ದಿಗ್ಗಜ ಸಚಿನ್ ತೆಂಡೂಲ್ಕರ್ ಇಂಥ ಸಾಧನೆ ಮಾಡಿದ್ದರು.
ತವರಿನಲ್ಲಿ ಕಿವೀಸ್ ವಿರುದ್ಧ ರನ್ ಬರ ಎದುರಿಸಿದ್ದ ವಿರಾಟ್ ಕೊಹ್ಲಿ, ಆಕರ್ಷಕ ಶತಕ ಸಿಡಿಸುವ ಮೂಲಕ ಲಯ ಕಂಡುಕೊಂಡರು. 16 ತಿಂಗಳ ಬಳಿಕ ಟೆಸ್ಟ್ ಶತಕ ಸಿಡಿಸಿದರು. ಒಟ್ಟಾರೆ 81ನೇ ಶತಕ ಗಳಿಸಿ ತಮ್ಮದೇ ಶೈಲಿಯಲ್ಲಿ ಸಂಭ್ರಮಿಸಿದರು. ಈ ವೇಳೆ ಆಸ್ಟ್ರಲಿಯಾ ನೆಲದಲ್ಲಿ ಸಚಿನ್ ದಾಖಲಿಸಿದ್ದ 6 ಶತಕಗಳ ದಾಖಲೆಯನ್ನು ಹಿಂದಿಕ್ಕಿದರು. ಜೊತೆಗೆ ಯುವ ಆಟಗಾರರಾದ ವಾಷಿಂಗ್ಟನ್ ಸುಂದರ್ 29 ರನ್, ಪದಾರ್ಪಣೆ ಆಟಗಾರ ನಿತೀಶ್ ಕುಮಾರ್ ರೆಡ್ಡಿ ಅಜೇಯ 38 ರನ್ಗಳಿಸಿದರು. ಇದರಿಂದ ಭಾರತ 2ನೇ ಇನ್ನಿಂಗ್ಸ್ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 487 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು.