ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ v/s ನೆದರ್ಲೆಂಡ್ ನಡುವೆ ವಿಶ್ವಕಪ್ ಪಂದ್ಯ ನಡೆಯುತ್ತಿದ್ದು ಟಾಸ್ ಗೆದ್ದು ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ.
ಅಂಕಪಟ್ಟಿಯಲ್ಲಿ ಭಾರತ ಈಗಾಗಲೇ ಅಗ್ರಸ್ಥಾನ ಕಾಯ್ದುಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ನೆದರ್ಲೆಂಡ್ ವಿರುದ್ಧದ ಪಂದ್ಯದ ಸೋಲು-ಗೆಲುವು ಭಾರತದ ಪಾಯಿಂಟ್ಸ್ ಪಟ್ಟಿಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ. ಟೀಂ ಇಂಡಿಯಾ ಆಡುತ್ತಿರುವ ರೀತಿಯನ್ನು ನೋಡಿದರೆ, ನೆದರ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ತನ್ನ ಒಂಬತ್ತನೇ ಸತತ ಗೆಲುವು ದಾಖಲಿಸುವ ಮೂಲಕ ಅಭಿಮಾನಿಗಳಿಗೆ ದೀಪಾವಳಿಯ ಉಡುಗೊರೆ ನೀಡಲು ಪ್ರಯತ್ನಿಸಲಿದೆ.
ವಾಸ್ತವವಾಗಿ ಭಾರತ ಮತ್ತು ನೆದರ್ಲೆಂಡ್ಸ್ ತಂಡಗಳು 12 ವರ್ಷಗಳ ನಂತರ ಏಕದಿನ ವಿಶ್ವಕಪ್ನಲ್ಲಿ ಮುಖಾಮುಖಿಯಾಗುತ್ತಿವೆ. 2011ರಲ್ಲಿ ನಡೆದ ಏಕದಿನ ವಿಶ್ವಕಪ್ನಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ಕೊನೆಯ ಬಾರಿ ಮುಖಾಮುಖಿಯಾಗಿದ್ದವು.