ನಾಗ್ಪುರದಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿಯು ನಾಳೆಯಿಂದ ಶುರುವಾಗಲಿದೆ.
ಪಶ್ಚಿಮ ಘಟ್ಟಗಳ ಸಾಲಿನ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದಕ್ಕೆ ಇದೇ ಕಾರಣ…
ಸರಣಿಯ ಬಳಿಕ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ತೆರಳಲಿದ್ದು, ಅದಕ್ಕೂ ಮುನ್ನ ಸಮತೋಲಿತ ಆಡುವ ಬಳಗವನ್ನು ರೂಪಿಸಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ.
ಅದರಂತೆ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದು, ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕಣಕ್ಕಿಳಿಯಲಿದ್ದಾರೆ.
ಇನ್ನು ವಿಕೆಟ್ ಕೀಪರ್ ಆಗಿ ಕೆಎಲ್ ರಾಹುಲ್ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚಿದೆ. ಹಾಗೆಯೇ ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಈ ಕೆಳಗಿನಂತಿರಲಿದೆ…
ರೋಹಿತ್ ಶರ್ಮಾ (ನಾಯಕ)
ಶುಭ್ಮನ್ ಗಿಲ್
ವಿರಾಟ್ ಕೊಹ್ಲಿ
ಶ್ರೇಯಸ್ ಅಯ್ಯರ್
ಕೆಎಲ್ ರಾಹುಲ್ (ವಿಕೆಟ್ ಕೀಪರ್)
ಹಾರ್ದಿಕ್ ಪಾಂಡ್ಯ
ರವೀಂದ್ರ ಜಡೇಜಾ
ಮೊಹಮ್ಮದ್ ಶಮಿ,
ಅರ್ಷದೀಪ್ ಸಿಂಗ್
ಹರ್ಷಿತ್ ರಾಣಾ
ವರುಣ್ ಚಕ್ರವರ್ತಿ
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.