ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಭಾರತ ತಂಡವು ಮೊದಲ ಮ್ಯಾಚ್ನಲ್ಲಿ ನ್ಯೂಝಿಲೆಂಡ್ ವಿರುದ್ಧ 58 ರನ್ಗಳ ಹೀನಾಯ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಗ್ರೂಪ್-ಎ ಅಂಕ ಪಟ್ಟಿಯಲ್ಲಿ -2.900 ನೆಟ್ ರನ್ ರೇಟ್ನೊಂದಿಗೆ ಕೊನೆಯ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್ ರೇಸ್ನಲ್ಲಿ ಉಳಿಯಬಹುದು.
ಉದ್ಯಮಿಗೆ ಬೆದರಿಕೆ ಆರೋಪ: ಕುಮಾರಸ್ವಾಮಿಗೆ ಸದ್ಯಕ್ಕಿಲ್ಲ ತನಿಖೆ ತಲೆಬಿಸಿ, ಕಾರಣ!?
ಮಹಿಳಾ ಟಿ 20 ವಿಶ್ವಕಪ್ 2024ರ ಮೊದಲ ಪಂದ್ಯದಲ್ಲಿ ಭಾರತವು ನ್ಯೂಜಿಲೆಂಡ್ ವಿರುದ್ಧ 58ರನ್ಗಳಿಂದ ಸೋತಿದೆ. ಈ ಪಂದ್ಯದಲ್ಲಿ ಭಾರತ ತಂಡದ ಬ್ಯಾಟಿಂಗ್ ಅತ್ಯಂತ ಕಳಪೆಯಾಗಿತ್ತು. ತಂಡದಲ್ಲಿ ಯಾವೊಬ್ಬ ಬ್ಯಾಟರ್ ಕೂಡ 20ರ ಗಡಿ ದಾಟಲು ವಿಫಲರಾದರು. ಈಗ ಎರಡನೇ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸುವುದು ಭಾರತಕ್ಕೆ ಅಗತ್ಯವಾಗಿದೆ. ಅಕ್ಟೋಬರ್ 6ರಂದು ಈ ಪಂದ್ಯ ನಡೆಯಲಿದೆ.
ಅತ್ತ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡಕ್ಕೆ ಸೋಲುಣಿಸಿರುವ ಪಾಕಿಸ್ತಾನ್ 2 ಅಂಕಗಳೊಂದಿಗೆ +1.550 ನೆಟ್ ರನ್ ರೇಟ್ ಹೊಂದಿದೆ. ಹೀಗಾಗಿ ಇಂದಿನ ಮ್ಯಾಚ್ನಲ್ಲಿ ಪಾಕ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ ಮೇಲೇರಬೇಕಾದ ಅನಿವಾರ್ಯತೆ ಇದೆ.
ಒಂದು ವೇಳೆ ಭಾರತ ತಂಡವು ಪಾಕಿಸ್ತಾನ್ ವಿರುದ್ಧ ಕೂಡ ಸೋತರೆ ಸೆಮಿಫೈನಲ್ ಹಾದಿ ಕಠಿಣವಾಗಲಿದೆ. ಏಕೆಂದರೆ ಟೀಮ್ ಇಂಡಿಯಾಗೆ ಇನ್ನುಳಿದಿರುವುದು ಕೇವಲ 2 ಮ್ಯಾಚ್ಗಳು ಮಾತ್ರ. ಈ ಪಂದ್ಯಗಳಲ್ಲಿ ಜಯ ಸಾಧಿಸಿದರೂ ಒಟ್ಟು 4 ಅಂಕಗಳನ್ನು ಮಾತ್ರ ಸಂಪಾದಿಸಬಹುದು. ಅತ್ತ ಎರಡು ತಂಡಗಳು 6 ಅಂಕಗಳನ್ನು ಕಲೆಹಾಕಿದರೆ ಟೀಮ್ ಇಂಡಿಯಾ ಸೆಮಿಫೈನಲ್ ರೇಸ್ನಿಂದ ಹೊರಬೀಳಲಿದೆ. ಹೀಗಾಗಿಯೇ ಇಂದಿನ ಪಂದ್ಯವು ಭಾರತದ ಪಾಲಿಗೆ ನಿರ್ಣಾಯಕ.
ಇನ್ನು ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಜಯ ಸಾಧಿಸಿ ಉಳಿದೆರಡು ಪಂದ್ಯಗಳಲ್ಲೂ ಜಯಭೇರಿ ಬಾರಿಸಿದರೆ ಒಟ್ಟು 6 ಅಂಕಗಳೊಂದಿಗೆ ನೇರವಾಗಿ ಸೆಮಿಫೈನಲ್ಗೆ ಪ್ರವೇಶಿಸಬಹುದು. ಹಾಗಾಗಿ ಪಾಕ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಅಮೋಘ ಗೆಲುವು ದಾಖಲಿಸುವ ಮೂಲಕ ಸೆಮಿಫೈನಲ್ ರೇಸ್ನಲ್ಲಿ ಉಳಿಯಬಹುದು.
ಭಾರತ ಮತ್ತು ಪಾಕಿಸ್ತಾನ ನಡುವಿನ ಮಹಿಳಾ ಟಿ 20 ವಿಶ್ವಕಪ್ ಪಂದ್ಯ ಅಕ್ಟೋಬರ್ 6 ರಂದು ನಡೆಯಲಿದೆ. ಈ ಪಂದ್ಯವು ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾನುವಾರ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ. ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ನಲ್ಲಿ ವಿವಿಧ ಭಾಷೆಗಳಲ್ಲಿ ಎಂಜಾಯ್ ಮಾಡಬಹುದು. ಆನ್ಲೈನ್ ಸ್ಟ್ರೀಮಿಂಗ್ ಅನ್ನು ಡಿಸ್ನಿ ಪ್ಲಸ್ ಹಾಟ್ಸ್ಟಾರ್ನಲ್ಲಿ ನೋಡಬಹುದು.
ಹೆಡ್ ಟು ಹೆಡ್ ರೆಕಾರ್ಡ್
ಭಾರತ ಮತ್ತು ಪಾಕಿಸ್ತಾನ ತಂಡಗಳು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಇಲ್ಲಿವರೆಗೆ 15 ಬಾರಿ ಮುಖಾಮುಖಿಯಾಗಿದ್ದು, 12 ಬಾರಿ ಟೀಮ್ ಇಂಡಿಯಾ, 3 ಪಂದ್ಯಗಳಲ್ಲಿ ಪಾಕಿಸ್ತಾನ ಜಯ ಸಾಧಿಸಿದೆ. ಟಿ20 ವಿಶ್ವಕಪ್ನಲ್ಲಿ 7 ಬಾರಿ ಮುಖಾಮುಖಿಯಾಗಿದ್ದು, 5 ರಲ್ಲಿ ಭಾರತ, 2ರಲ್ಲಿ ಪಾಕಿಸ್ತಾನ ಗೆಲುವು ಸಾಧಿಸಿದೆ.