ಈ ಬಾರಿ ಯಾವುದೇ ವಿಶ್ವಕಪ್ ಗೆಲ್ಲದಿರುವ ಸೌತ್ ಆಫ್ರಿಕಾ ತಂಡವು ಚೊಚ್ಚಲ ಬಾರಿಗೆ ಫೈನಲ್ಗೆ ಪ್ರವೇಶಿಸಿದೆ. ಮತ್ತೊಂದೆಡೆ 2007ರ ಬಳಿಕ ಟಿ20 ವಿಶ್ವಕಪ್ ಗೆಲ್ಲದ ಭಾರತ ತಂಡವು 10 ವರ್ಷಗಳ ಬಳಿಕ ಚುಟುಕು ಕ್ರಿಕೆಟ್ ಮಹಾಸಮರದಲ್ಲಿ ಫೈನಲ್ಗೆ ಪ್ರವೇಶಿಸಿದೆ.
World Cup 2024: ಕಳಪೆ ಪ್ರದರ್ಶನ.. ಫೈನಲ್ ಪಂದ್ಯದಲ್ಲಿ ಹೊರಗುಳಿಯುತ್ತಾರಾ ಕಿಂಗ್ ಕೊಹ್ಲಿ…!?
ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
ಉಭಯ ತಂಡಗಳು ಈ ಬಾರಿಯ ವಿಶ್ವಕಪ್ನಲ್ಲಿ ಸೋಲಿಲ್ಲದ ಸರದಾರರಾಗಿ ಫೈನಲ್ಗೆ ಎಂಟ್ರಿ ಕೊಟ್ಟಿದೆ. ಟೀಮ್ ಇಂಡಿಯಾ ಆಡಿರುವ 7 ಪಂದ್ಯಗಳಲ್ಲೂ ವಿಜಯ ಸಾಧಿಸಿದರೆ, ಅತ್ತ ಸೌತ್ ಆಫ್ರಿಕಾ 8 ಮ್ಯಾಚ್ಗಳನ್ನು ಗೆದ್ದು ಅಂತಿಮ ಸುತ್ತಿಗೆ ಪ್ರವೇಶಿಸಿದೆ. ಹೀಗಾಗಿ ಫೈನಲ್ನಲ್ಲಿ ಭರ್ಜರಿ ಪೈಪೋಟಿ ಕಂಡು ಬರುವ ನಿರೀಕ್ಷೆಯಿದೆ.
ಟಿ20 ಕ್ರಿಕೆಟ್ನಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಈವರೆಗೆ 26 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಸೌತ್ ಆಫ್ರಿಕಾ ತಂಡ 11 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಟೀಮ್ ಇಂಡಿಯಾ 13 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿದೆ.
ಇನ್ನು ಟಿ20 ವಿಶ್ವಕಪ್ನಲ್ಲಿ ಉಭಯ ತಂಡಗಳು ಒಟ್ಟು 6 ಬಾರಿ ಪರಸ್ಪರ ಕಣಕ್ಕಿಳಿದಿದೆ. ಈ ವೇಳೆ ಟೀಮ್ ಇಂಡಿಯಾ 4 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಸೌತ್ ಆಫ್ರಿಕಾ ಗೆದ್ದಿರುವುದು ಕೇವಲ 2 ಬಾರಿ ಮಾತ್ರ.
ಎಷ್ಟು ಗಂಟೆಗೆ ಪಂದ್ಯ ಶುರು?
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ. ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಕನ್ನಡ ಸೇರಿದಂತೆ ಸ್ಟಾರ್ ನೆಟ್ವರ್ಕ್ನ ಎಲ್ಲಾ ಚಾನೆಲ್ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಡಿಸ್ನಿ ಹಾಟ್ ಸ್ಟಾರ್ ಮೊಬೈಲ್ ಆ್ಯಪ್ನಲ್ಲಿ ಉಚಿತ ನೇರ ಪ್ರಸಾರ ಇರಲಿದೆ