ಜೋಹಾನ್ಸ್ಬರ್ಗ್ನ ವಾಂಡರರ್ಸ್ ಸ್ಟೇಡಿಯಂನಲ್ಲಿ ಸೌತ್ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 135 ರನ್ಗಳ ಅಮೋಘ ಗೆಲುವು ದಾಖಲಿಸಿದೆ.
BBK 11: ಬಾತ್ ರೂಂನಲ್ಲಿ ಹಠಾತ್ ಕುಸಿದು ಬಿದ್ದ ಚೈತ್ರಾ: ಅಷ್ಟಕ್ಕೂ ಆಗಿದ್ದೇನು!?
ಪಂದ್ಯದಲ್ಲಿ ಟಾಸ್ ಗೆದ್ದ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬ್ಯಾಟ್ ಬೀಸಿದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಟೀಮ್ ಇಂಡಿಯಾಗೆ ಸ್ಪೋಟಕ ಆರಂಭ ಒದಗಿಸಿದ್ದರು.
ಮೊದಲ ವಿಕೆಟ್ಗೆ 73 ರನ್ ಗಳ ಜೊತೆಯಾಟವಾಡಿ ಅಭಿಷೇಕ್ ಶರ್ಮಾ (36) ಔಟಾದರು. ಆ ಬಳಿಕ ಶುರುವಾಗಿದ್ದೇ ಸ್ಯಾಮ್ಸನ್ – ತಿಲಕ್ ವರ್ಮಾ ಅಬ್ಬರ. ಈ ಜೋಡಿಯು 2ನೇ ವಿಕೆಟ್ಗೆ 210 ರನ್ಗಳ ಜೊತೆಯಾಟವಾಡಿದರು.
ಇದರ ನಡುವೆ ಸಂಜು ಸ್ಯಾಮ್ಸನ್ 56 ಎಸೆತಗಳಲ್ಲಿ ಅಜೇಯ 106 ರನ್ ಬಾರಿಸಿದರೆ, ತಿಲಕ್ ವರ್ಮಾ 47 ಎಸೆತಗಳಲ್ಲಿ ಅಜೇಯ 120 ರನ್ ಸಿಡಿಸಿದರು. ಈ ಮೂಲಕ ಟೀಮ್ ಇಂಡಿಯಾ 20 ಓವರ್ಗಳಲ್ಲಿ 1 ವಿಕೆಟ್ ನಷ್ಟದೊಂದಿಗೆ 283 ರನ್ ಕಲೆಹಾಕಿತು.
283 ರನ್ಗಳೊಂದಿಗೆ ಸೌತ್ ಆಫ್ರಿಕಾದಲ್ಲಿ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾ ತಂಡದ ಹೆಸರಿನಲ್ಲಿತ್ತು. 2007ರ ಟಿ20 ವಿಶ್ವಕಪ್ನಲ್ಲಿ ಜೋಹಾನ್ಸ್ಬರ್ಗ್ನಲ್ಲಿ ಶ್ರೀಲಂಕಾ ತಂಡವು ಕೀನ್ಯಾ ವಿರುದ್ಧ 260 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ 283 ರನ್ ಸಿಡಿಸಿ ಟೀಮ್ ಇಂಡಿಯಾ ಸೌತ್ ಆಫ್ರಿಕಾದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.
ಇನ್ನು ಟೀಮ್ ಇಂಡಿಯಾ ನೀಡಿದ 283 ರನ್ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 18.2 ಓವರ್ಗಳಲ್ಲಿ 148 ರನ್ಗಳಿಗೆ ಆಲೌಟ್ ಆದರು. ಈ ಮೂಲಕ ಭಾರತ ತಂಡವು 135 ರನ್ಗಳ ಅಮೋಘ ಗೆಲುವು ದಾಖಲಿಸಿದೆ.