ಕುಪ್ವಾರ: ನಾಲ್ವರು ಭಯೋತ್ಪಾದಕರು ಭಾರತದ ಒಳಗೆ ಬರಲು ಪ್ರಯತ್ನ ಮಾಡಿದ್ದಾರೆ. ಇದನ್ನು ಭಾರತೀಯ ಭದ್ರತಾ ಪಡೆಗಳು ವಿಫಲಗೊಳಿಸಿದ್ದು, ಜಮ್ಮು ಕಾಶ್ಮೀರದ (Jammu and Kashmir) ಕುಪ್ವಾರದಲ್ಲಿ 4 ಭಯೋತ್ಪಾದಕರು ಎನ್ಕೌಂಟರ್ ಮಾಡಿದ್ದಾರೆ.
ಇನ್ನೂ ಇಂದಿನಿಂದ ಅಮಿತ್ ಶಾ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಭಾರೀ ಭದ್ರತೆಯನ್ನು ಕೂಡ ನೀಡಲಾಗಿದೆ. ಈ ಬಗ್ಗೆ ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು, ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ POJK ನಿಂದ ನಮ್ಮ ಕಡೆಗೆ ನುಸುಳಲು ಪ್ರಯತ್ನಿಸುತ್ತಿದ್ದ ಕುಪ್ವಾರದ ಮಚ್ಚಲ್ ಸೆಕ್ಟರ್‌ನ ಕಾಲಾ ಜಂಗಲ್‌ನಲ್ಲಿ ನಾಲ್ವರು ಭಯೋತ್ಪಾದಕರನ್ನು ಎನ್ಕೌಂಟರ್ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಒಂದು ವಾರದ ಹಿಂದೆ ಇದೇ ರೀತಿಯಲ್ಲಿ ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಗೆ (ಎಲ್‌ಒಸಿ) ಸಮೀಪವಿರುವ ಜಮ್‌ಗುಂಡ್ ಕೆರಾನ್‌ನಲ್ಲಿ ಒಳನುಸುಳುವಿಕೆಯ ಪ್ರಯತ್ನ ಮಾಡಿದ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಎನ್ ಕೌಂಟರ್ ಮಾಡಿದ ನಂತರ ಈ ಘಟನೆ ನಡೆದಿದೆ.
