ವಾಷಿಂಗ್ಟನ್: ಅಮೆರಿಕದ (America) ಇಂಡಿಯಾನಾದಲ್ಲಿ ಫಿಟ್ನೆಸ್ ಸೆಂಟರ್ನಲ್ಲಿ (Fitness Center) ಚಾಕು ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಭಾರತ ಮೂಲದ ವಿದ್ಯಾರ್ಥಿ (Indian Student) ವರುಣ್ ರಾಜ್ ಪುಚಾ (24) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ಆತ ವ್ಯಾಸಂಗ ಮಾಡುತ್ತಿದ್ದ ವಿಶ್ವವಿದ್ಯಾಲಯ ತಿಳಿಸಿದೆ.
ವಾಲ್ಪಾರೈಸೊ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ವರುಣ್ (Varun Raj Pucha) ಅಕ್ಟೋಬರ್ 29 ರಂದು ಸಾರ್ವಜನಿಕ ಜಿಮ್ನಲ್ಲಿದ್ದಾಗ ದುಷ್ಕರ್ಮಿ ಜೋರ್ಡಾನ್ ಆಂಡ್ರೇಡ್ (24) ಎಂಬಾತ ಆತನ ತಲೆಗೆ ಚಾಕುವಿನಿಂದ ಇರಿದಿದ್ದ. ಘಟನೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.
Kolar: ಹುಡುಗಿಗೆ ಮೆಸೇಜ್ ಕಳಿಸಿದ್ದೇ ಕೊಲೆಗೆ ಕಾರಣವಾಯ್ತಾ..? ಐಜಿಪಿ ರವಿಕಾಂತೇಗೌಡ ಹೇಳೋದೇನು?
ವಿದ್ಯಾರ್ಥಿ ಅಗಲಿಕೆ ಬಳಿಕ ಮಾಹಿತಿ ನೀಡಿರುವ ವಾಲ್ಪರೈಸೊ ವಿಶ್ವವಿದ್ಯಾಲಯ, ವರುಣ್ ರಾಜ್ ಪುಚ್ಚಾ ಅಗಲಿಕೆ ಸುದ್ದಿಯನ್ನು ನಾವು ಭಾರವಾದ ಹೃದಯದಿಂದ ಹಂಚಿಕೊಳ್ಳುತ್ತಿದ್ದೇವೆ. ನಮ್ಮ ಕ್ಯಾಂಪಸ್ ಸಮುದಾಯದ ಭಾಗವಾಗಿದ್ದ ವಿದ್ಯಾರ್ಥಿಯನ್ನು ಕಳೆದುಕೊಂಡಿದ್ದೇವೆ. ಈ ನಷ್ಟಕ್ಕೆ ನಾವು ತೀವ್ರವಾಗಿ ವಿಷಾದಿಸುತ್ತೇವೆ. ನಾವು ಅಗಲಿದ ವಿದ್ಯಾರ್ಥಿ ವರುಣ್ನ ಕುಟುಂಬ ಮತ್ತು ಸ್ನೇಹಿತರೊಂದಿಗಿದ್ದೇವೆ ಎಂದು ಹೇಳಿದೆ.