ನಮಗೆ ಟ್ರೋಫಿಗಿಂತ ಭಾರತದ ಸೋಲು ಮುಖ್ಯ ಎಂದು ಪಾಕ್ ಪ್ರಧಾನಿ ಷರೀಫ್ ಹೇಳಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಕೇವಲ 11 ದಿನಗಳು ಮಾತ್ರ ಬಾಕಿ ಉಳಿದಿವೆ. ಬದ್ಧವೈರಿಗಳಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಟೂರ್ನಿಯ ಹೈವೋಲ್ಟೇಜ್ ಕದನ ಫೆಬ್ರವರಿ 23 ರಂದು ದುಬೈನಲ್ಲಿ ನಡೆಯಲಿದೆ.
ಮೀನಿನ ಈ ಭಾಗ ಎಸೆಯುತ್ತೀರಾ!? ಬೇಡ ಜನರೇ, ಇದರಲ್ಲೇ ಇರೋದು ಪ್ರೋಟೀನ್!
ಈ ನಡುವೆ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಈ ಐಸಿಸಿ ಟೂರ್ನಿಯ ಬಗ್ಗೆ ಮಾತನಾಡಿದ್ದು, ನಮಗೆ ಪಂದ್ಯಾವಳಿಯನ್ನು ಗೆಲ್ಲುವುದಕ್ಕಿಂತ ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧದ ಪಂದ್ಯವನ್ನು ಗೆಲ್ಲುವುದೇ ನಿಜವಾದ ಸವಾಲು ಎಂದಿದ್ದಾರೆ.
ನಮ್ಮ ತಂಡಕ್ಕೆ ಚಾಂಪಿಯನ್ಸ್ ಟ್ರೋಫಿ ಗೆಲ್ಲುವುದು ಮಾತ್ರವಲ್ಲದೆ ಫೆಬ್ರವರಿ 23 ರಂದು ದುಬೈನಲ್ಲಿ ಭಾರತವನ್ನು ಸೋಲಿಸುವುದು ಸಹ ನಿಜವಾದ ಸವಾಲು. ತಮ್ಮ ಆಟಗಾರರು ಭಾರತದ ವಿರುದ್ಧ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಬೇಕು. ನಮ್ಮ ತಂಡವು ತುಂಬಾ ಬಲಿಷ್ಠವಾಗಿದ್ದು, ಇತ್ತೀಚಿನ ದಿನಗಳಲ್ಲಿ ಉತ್ತಮ ಪ್ರದರ್ಶನ ನೀಡಿದೆ.
ಆದರೆ ಈಗ ಅವರ ಮುಂದಿರುವ ನಿಜವಾದ ಸವಾಲು ಚಾಂಪಿಯನ್ಸ್ ಟ್ರೋಫಿಯನ್ನು ಗೆಲ್ಲುವುದು ಮಾತ್ರವಲ್ಲದೆ ದುಬೈನಲ್ಲಿ ನಡೆಯಲಿರುವ ಪಂದ್ಯದಲ್ಲಿ ನಮ್ಮ ಸಾಂಪ್ರದಾಯಿಕ ಎದುರಾಳಿ ಭಾರತವನ್ನು ಸೋಲಿಸುವುದು. ಪಾಕಿಸ್ತಾನ ತಂಡಕ್ಕೆ ಇಡೀ ದೇಶದ ಬೆಂಬಲವಿದೆ. ಸುಮಾರು 29 ವರ್ಷಗಳ ನಂತರ ನಾವು ಐಸಿಸಿ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದರಿಂದ ಇದು ಪಾಕಿಸ್ತಾನಕ್ಕೆ ಒಂದು ದೊಡ್ಡ ಸಂದರ್ಭವಾಗಿದೆ. ಚಾಂಪಿಯನ್ಸ್ ಟ್ರೋಫಿಯಲ್ಲೂ ನಮ್ಮ ತಂಡ ದೇಶಕ್ಕೆ ಹೆಮ್ಮೆ ತರುತ್ತದೆ ಎಂಬ ಸಂಪೂರ್ಣ ನಂಬಿಕೆ ನನಗಿದೆ ಎಂದು ಪ್ರಧಾನಿ ಷರೀಫ್ ಹೇಳಿದ್ದಾರೆ.