ಬಜರಂಗ್ ಪೂನಿಯಾಗೆ ಕೊಲೆ ಬೆದರಿಕೆ ಬಂದಿದ್ದು, ವಿದೇಶಿ ಸಂಖ್ಯೆಯಿಂದ ತನಗೆ ಬೆದರಿಕೆ ಸಂದೇಶ ಬಂದಿದೆ ಎಂದು ಬಜರಂಗ್ ಆರೋಪಿಸಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ರೈತರ ಮನವಿ: ಮಹದಾಯಿ ಯೋಜನೆ ಅನುಷ್ಠಾನಕ್ಕೆ ಒತ್ತಾಯ!
ಆದಷ್ಟು ಬೇಗ ಕಾಂಗ್ರೆಸ್ ತೊರೆಯಬೇಕು ಇಲ್ಲದಿದ್ದರೆ ನಿಮಗೂ, ನಿಮ್ಮ ಕುಟುಂಬಕ್ಕೂ ಕಂಟಕ ಕಾದಿದೆ. ಇದು ನಮ್ಮ ಕೊನೆಯ ಸಂದೇಶ. ಚುನಾವಣೆಗೂ ಮುನ್ನ ನಾವೇನು ಎಂಬುದನ್ನು ತೋರಿಸುತ್ತೇವೆ. ನೀವು ಎಲ್ಲಿ ಬೇಕಾದರೂ ದೂರು ನೀಡಿ, ಇದು ನಮ್ಮ ಮೊದಲ ಮತ್ತು ಕೊನೆಯ ಎಚ್ಚರಿಕೆ’ ಎಂದು ಅನಾಮಿಕ ವ್ಯಕ್ತಿಯಿಂದ ಸಂದೇಶ ಬಂದಿದೆ ಎಂದು ಬಜರಂಗ್ ತಿಳಿಸಿದ್ದಾರೆ.
ಇನ್ನು ಬೆದರಿಕೆಯ ಸಂದೇಶ ಬಂದ ನಂತರ ಬಜರಂಗ್, ಸೋನಿಪತ್ ಬಹಲ್ಗಢ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬಜರಂಗ್ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.