ಚಾಮರಾಜನಗರ:- ಮತಗಟ್ಟೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರದ ಒಂದು ಮತಗಟ್ಟೆಗೆ ಎ.29ರಂದು ಮರುಮತದಾನ ನಡೆಯಲಿದೆ.
ನಿತ್ಯ ರಾತ್ರಿ ಒಂದೇ ಒಂದು ಎಸಳು ಬೆಳ್ಳುಳ್ಳಿ ತಿನ್ನಿ.. ದೇಹದಲ್ಲಾಗುವ ಚಮತ್ಕಾರ ನೋಡಿ..!
ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ ನೀಡಿದೆ. ಚುನಾವಣೆ ಬಹಿಷ್ಕರಿಸಿ ಗ್ರಾಮಸ್ಥರು ಮತಗಟ್ಟೆಯ ಮೇಲೆ ದಾಳಿ ಮಾಡಿ ಮತಗಟ್ಟೆಯನ್ನು ಪುಡಿಗುಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮತದಾನ ಸ್ಥಗಿತಗೊಂಡಿತ್ತು. ಈ ಮತಗಟ್ಟೆಗೆ ಎ.29 ರಂದು ಬೆಳಗ್ಗೆ 7.00 ರಿಂದ ಸಂಜೆ 6.00 ರವರೆಗೆ ಮರುಮತದಾನ ನಡೆಯಲಿದೆ.
ಹನೂರಿನ ಮತಗಟ್ಟೆ ಸಂಖ್ಯೆ 146 ರಲ್ಲಿ ಈ ಘಟನೆ ಸಂಭವಿಸಿತ್ತು. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಕೊರತೆ ಹಿನ್ನಲೆಯಲ್ಲಿ ಮತ ಬಹಿಷ್ಕಾರಕ್ಕೆ ಮುಂದಾಗಿದ್ದರು. ಇದನ್ನು ಅರಿತ ತಹಸೀಲ್ದಾರ್ ಗುರುಪ್ರಸಾದ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ರವರು ಮತದಾರರನ್ನು ಮನವೊಲಿಸಲು ಮುಂದಾದರು. ಮತ ಚಲಾವಣೆಗೆ ಬಂದ ಮತದಾರರನ್ನು ಕಂಡು ಕೆರಳಿದ ಮತ್ತೊಂದು ಗುಂಪಿನವರು ಮಾತಿನ ಚಕಮಕಿ ನಡೆದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮತಗಟ್ಟೆ ಗೆ ನುಗ್ಗಿದ ಗಲಾಟೆ ಮಾಡಿದರು.