ಬೆಂಗಳೂರು:- ನಟಿ ರನ್ಯಾ ರಾವ್ ಬಂಧನ ಹಾಗೂ ದುಬೈನಿಂದ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ.
ಆರೋಪಿತೆ ನಟಿ ರನ್ಯಾ ರಾವ್ಗೆ ಹಲವು ರಾಜಕೀಯ ನಾಯಕರ ಜೊತೆ ಸಂಪರ್ಕ ಇದೆ. ಅದರಲ್ಲೂ ಕಾಂಗ್ರೆಸ್ ಸರ್ಕಾರದ ಪ್ರಭಾವಿ ರಾಜಕಾರಣಿಯ ಹೆಸರು ಕೂಡ ಇದರಲ್ಲಿ ಕೇಳಿ ಬಂದಿದೆ. ಸಚಿವ ಹುದ್ದೆ ಅಲಂಕರಿಸಿರುವ ಆ ರಾಜಕಾರಣಿಗೂ ರನ್ಯಾ ರಾವ್ ಪ್ರಕರಣದಲ್ಲಿ ಸಂಕಷ್ಟ ಎದುರಾಗುವ ಭೀತಿ ಇದೆ.
ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಕಾಡಾನೆ ದಾಳಿ ; ಮಹಿಳೆಗೆ ಗಂಭೀರ ಗಾಯ
ಕಳೆದ ಮೂರು ತಿಂಗಳ ಹಿಂದೆ ಬೆಂಗಳೂರಲ್ಲಿ ರನ್ಯಾ ರಾವ್ ಅದ್ಧೂರಿ ವಿವಾಹ ಮಹೋತ್ಸವ ನಡೆದಿತ್ತು. ಆ ಮದುವೆಯಲ್ಲಿ ಪ್ರಭಾವಿ ಸಚಿವರು ಭಾಗಿಯಾಗಿದ್ದರು. ಇದೀಗ ನಟಿ ರನ್ಯಾ ರಾವ್ ಬಂಧನವಾಗುತ್ತಿದ್ದಂತೆ ಆ ಸಚಿವರು ತಬ್ಬಿಬ್ಬಾಗಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ರಾವ್ ಬಂಧನವಾಗುತ್ತಿದ್ದಂತೆ ಪ್ರಭಾವಿ ಸಚಿವರು ಈ ಕೇಸ್ ಅನ್ನು ಮ್ಯಾನೇಜ್ ಮಾಡಲು ತೆರೆಮರೆಯಲ್ಲಿ ಕಸರತ್ತು ಮಾಡಿದ್ದಾರೆ. ಆದರೆ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ಈ ಕೇಸ್ ತನಿಖೆ ಮುಂದುವರಿಸಿದ್ದಾರೆ.
ರನ್ಯಾ ರಾವ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಡಿಆರ್ಐ ಅಧಿಕಾರಿಗಳು ಈ ಪ್ರಕರಣದ ಹಿಂದೆ ಇರುವ ಪ್ರಭಾವಿ ಕೈಗಳ ಜಾಡು ಪತ್ತೆ ಮಾಡುತ್ತಿದ್ದಾರೆ.