ಬಳ್ಳಾರಿ: ವಕ್ಫ್ ವಿಚಾರದಲ್ಲಿ ಹಿಂದೂ-ಮುಸ್ಲಿಂ ಸಮುದಾಯದವರಿಗೆ ಅನ್ಯಾಯವಾಗಿದೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಕ್ಫ್ ಬೋರ್ಡ್ ವಿಚಾರದಲ್ಲಿ ಎರಡನೇ ಹಂತದ ಹೋರಾಟ ಮಾಡುತ್ತೇವೆ. ಜ.4 ರಂದು ಬಳ್ಳಾರಿಯ ಕಂಪ್ಲಿಯಲ್ಲಿ ಸಮಾವೇಶ ಮಾಡ್ತೇವೆ.
Jasmine: ನಿಮ್ಮ ಮಲ್ಲಿಗೆ ಗಿಡದಲ್ಲಿ ಸಿಕ್ಕಾಪಟ್ಟೆ ಹೂವುಗಳು ಬಿಡಬೇಕಾ..? ಹಾಗಾದ್ರೆ ಹೀಗೆ ಮಾಡಿ ಸಾಕು
ಜ.6 ರಂದು ಕೂಡ ಹೋರಾಟ ನಡೆಯಲಿದೆ. ವಕ್ಫ್ ವಿಚಾರದಲ್ಲಿ ಹಿಂದೂ-ಮುಸ್ಲಿಂ ಸಮುದಾಯದವರಿಗೆ ಅನ್ಯಾಯವಾಗಿದೆ. ವಕ್ಫ್ ಕಾಯ್ದೆ ಸಂಪೂರ್ಣವಾಗಿ ತೊಲಗಬೇಕು ಅಂತ ನಾವು ಹೋರಾಟ ಮಾಡ್ತೇವೆ ಎಂದು ತಿಳಿಸಿದರು. ಬಿಜೆಪಿ ಕಚೇರಿಗಳಲ್ಲಿ ಮುಂದೆ ನಾವು ಸಭೆಗಳು ಮಾಡ್ತೇವೆ. ಪಕ್ಷಾತೀತವಾಗಿ ನಾವು ಹೋರಾಟ ಮಾಡ್ತೇವೆ ಎಂದರು.