ಬೀದರ್: ನಗರದ ಹಾರೋಗೆರಿ ಬಳಿ ಕಾರು ಹರಿದ ಪರಿಣಾಮ 2 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ. ಬಸವಚೇತನ ಮೃತಪಟ್ಟ ದುರ್ದೈವಿ ಮಗು ಎನ್ನಲಾಗಿದೆ. ಹಾರೊಗೇರಿ ನಿವಾಸಿ ಸತೀಶ ಪಾಟೀಲ ಹಾಗೂ ಸಂಗೀತಾ ದಂಪತಿ ಪುತ್ರ ಬಸವಚೇತನ.
ಹೆಚ್ಚುತ್ತಲೇ ಇದೆ PM ಮೋದಿ ಕ್ರೇಜ್ – 2 ಕೋಟಿ ಚಂದಾದಾರರ ಸಂಖ್ಯೆ ದಾಟಿತು ಯೂಟ್ಯೂಬ್ ಚಾನೆಲ್
ಆಟವಾಡುತ್ತ ರಸ್ತೆ ಬದಿಯಲ್ಲಿ ಮಗು ಬಂದಿದ್ದ ವೇಳೆ ಇನ್ನೋವಾ ಕಾರು ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮಗುವಿನ ಮೇಲೆ ಕಾರು ಹರಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಗಾಂಧಿಗಂಜ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.