ರಾಯಚೂರು:- ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರು ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.
ರಾಹುಲ್ ಗಾಂಧಿ ಕೈಯಲ್ಲಿರುವುದು ಬೈಬಲ್: ಬೆಲ್ಲದ್ ಹೇಳಿಕೆಗೆ ಹರಿಪ್ರಸಾದ್ ಕಿಡಿ!
ಠಾಣೆಯ ಮಹಿಳಾ ಕಾನ್ಸ್ಟೇಬಲ್ಸ್ಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ಕೇಸ್ ದಾಖಲಾಗಿದೆ. ಸುರೇಶ್ ರಾತ್ರಿಯಾದರೆ ಮಹಿಳಾ ಸಿಬ್ಬಂದಿಗಳಿಗೆ ವಿಡಿಯೋ ಕರೆ ಮಾಡಿ ಕಾಮ ಪ್ರಚೋದಕ ಮತುಗಳನ್ನು ಆಡುತ್ತಾರೆ. ಕೆಟ್ಟದಾಗಿ ಅಸಹ್ಯ ಪದಗಳನ್ನು ಬಳಸಿಕೊಂಡು ಮಾತನಾಡುತ್ತಾರೆ. ಠಾಣೆಯಲ್ಲಿ ರಜೆ ಕೇಳಲು ಹೋದಾಗ ನಮ್ಮ ಸೌಂದರ್ಯದ ಬಗ್ಗೆ ಮಾತನಾಡುತ್ತಾರೆ ಎಂದು ಆರೋಪಿಸಿ ಮಹಿಳಾ ಆಯೋಗದ ಮೊರೆ ಹೋಗಿದ್ದಾರೆ.
ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರು ವಿರುದ್ಧ ಮೂರು ಪುಟಗಳಷ್ಟು ದೂರು ಬರೆದಿದ್ದು. ರಾತ್ರಿ ಆದ್ರೆ ವಿಡಿಯೋ ಕಾಲ್ ಮಾಡಿ ನಮ್ಮ ಜೊತೆಗೆ ಕೆಟ್ಟದಾಗಿ ಮಾತನಾಡುತ್ತಾರೆ. ವಿಡಿಯೋ ಕಾಲ್ನಲ್ಲಿ ಸರಿಯಾಗಿ ಮಾತನಾಡದೆ ಹೋದ್ರೆ ನಿರಂತರವಾಗಿ ಕಿರುಕುಳ ಕೊಡುತ್ತಾರೆ. ರಜೆ ಕೇಳಲು ಹೋದಾಗ ನಮ್ಮ ಸೌಂದರ್ಯದ ಬಗ್ಗೆ ಮಾತನಾಡುತ್ತಾರೆ. ಈ ಇನ್ಸ್ಪೆಕ್ಟರ್ನಿಂದ ನಮ್ಮ ಕುಟುಂಬದಲ್ಲಿ ಬಿರುಕು ಮೂಡಿವೆ. ಹೀಗಾಗಿ ಇನ್ಸ್ಪೆಕ್ಟರ್ನಿಂದ ನಮಗೆ ಮುಕ್ತಿ ಕೊಡಿಸಿ ಎಂದು ಪತ್ರದ ಮೂಲಕ ಕೇವಲ ಮಹಿಳಾ ಆಯೋಗಕ್ಕೆ ಮಾತ್ರವಲ್ಲ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಡಿಜಿ&ಐಜಿಪಿಗೆ ಅಂಗಲಾಚಿ ಬೇಡಿಕೊಂಡಿದ್ದಾರೆ.