ಬಿಗ್ಬಾಸ್ ಮನೆಯ ರಕ್ಕಸ-ಗಂಧರ್ವರ ಟಾಸ್ಕ್ನ ಎರಡನೇ ಮುಖ ಆರಂಭಗೊಂಡಿದೆ. ನಾಣ್ಯದ ಬದಿಗಳು ಅದಲುಬದಲಾಗಿವೆ. ರಕ್ಕಸರು ಗಂಧರ್ವರಾಗಿದ್ದಾರೆ. ಗಂಧರ್ವರು ರಕ್ಕಸರಾಗಿದ್ದಾರೆ. ಈ ಅದಲುಬದಲಿನ ಆಟದ ಪರಿಣಾಮ ಏನಾಗುತ್ತಿದೆ ಎಂಬುದು JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿಜಾಹೀರಾಗಿದೆ.
ನಿನ್ನೆಯಿಂದ ಸಂಗೀತಾ ತಂಡದ ಸದಸ್ಯರು ರಕ್ಕಸರಾಗಿ ಇಡೀ ಮನೆಯಲ್ಲಿ ಮೆರೆದಾಡಿದ್ದರು. ವರ್ತೂರು ತಂಡದ ಗಂಧರ್ವರನ್ನು ಬಗೆಬಗೆಯಾಗಿ ಗೋಳು ಹೊಯ್ದುಕೊಂಡಿದ್ದರು. ನಂತರ ಬಾವುಟ ನೆಡುವ ಟಾಸ್ಕ್ನಲ್ಲಿ ಕೂಡ ಎರಡೂ ತಂಡಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಇಂದು ವೇಷಗಳು ಹಾಗೆಯೇ ಇವೆ. ಅದರೊಳಗಿನ ವ್ಯಕ್ತಿಗಳು ಬದಲಾಗಿದ್ದಾರೆ. ರಕ್ಕಸರಾಗಿದ್ದವರು ಗಂಧರ್ವ ವೇಷ ತೊಟ್ಟು ನಸುನಗುತ್ತಿದ್ದಾರೆ. ಗಂಧರ್ವರಾಗಿದ್ದವರು ರಕ್ಕಸರಾಗಿ ಅಟ್ಟಹಾಸಗೈಯುತ್ತಿದ್ದಾರೆ.
ವರ್ತೂರು ತಂಡದ ಸದಸ್ಯರು ನಿನ್ನೆಅನುಭವಿಸಿದ ಅವಮಾನ-ನೋವುಗಳನ್ನೆಲ್ಲ ಬಡ್ಡಿಸಮೇತ ತೀರಿಸಲು ಹೊರಟಂತಿದೆ. ಕಾರ್ತಿಕ್ ಬಳಿ ವಿನಯ್, ಆನೆ ಬೀಳಿಸಿದ್ದಕ್ಕೆ ಕ್ಷಮೆ ಕೇಳಿಸಿಕೊಳ್ಳುತ್ತಿದ್ದಾರೆ. ರಕ್ಕಸರಾಗಿದ್ದಾಗ ಮೆರೆದಾಡಿದ್ದ ಕಾರ್ತಿಕ್ ಅವರನ್ನೇ ಗಂಧರ್ವ ತಂಡ ಟಾರ್ಗೆಟ್ ಮಾಡಿಕೊಂಡು ಬಗೆಬಗೆಯ ಶಿಕ್ಷೆಗಳನ್ನು ನೀಡುತ್ತಿರುವಂತಿದೆ.
ಬದಲಾದ ಈ ಆಯಾಮದಲ್ಲಿ ಯಾರು ಗೆಲ್ಲುತ್ತಾರೆ? ಯಾರು ಸೋತು ಶರಣಾಗುತ್ತಾರೆ?ಬಿಗ್ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ. ಪ್ರತಿದಿನದ ಎಪಿಸೋಡ್ಗಳನ್ನು Colors Kannada ದಲ್ಲಿ ರಾತ್ರಿ 9.30ಕ್ಕೆ ವೀಕ್ಷಿಸಿ.