ಕಲಬುರಗಿ: ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿರೋದನ್ನ ಖಂಡಿಸಿ ಸ್ಥಳೀಯರು ರಸ್ತೆ ತಡೆ ನಡೆಸಿ ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ನಗರದ ಕೋಟನೂರು ಬಡಾವಣೆಯಲ್ಲಿ ಘಟನೆ ನಡೆದಿದ್ದು ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ರು. ಟೈರಿಗೆ ಬೆಂಕಿಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಜಿಲ್ಲಾಡಳಿತ ನ್ಯಾಯ ಕೊಡಿಸಬೇಕು ಅಂತ ಒತ್ತಾಯಿಸಿದ್ರು..